Published
5 months agoon
By
Akkare News
ಪುತ್ತೂರು: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ ಮಾಡುವಲ್ಲಿ ಇಲಾಖೆಯು ಅನುಮೋದನೆ ನೀಡುವಂತೆ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿಯವರಿಗೆ ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.
ಬಹುತೇಕ ದೇವಸ್ಥಾನಗಳಲ್ಲಿ ಹಿಂದಿನ ಸಮಿತಿಗಳು ಬರ್ಕಾಸ್ತುಗೊಂಡಿದೆ.ನೂತನ ಸಮಿತಿಯನ್ನು ರಚನೆ ಮಾಡದೇ ಇರುವ ಕಾರಣ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗಿದ್ದು ಇಲಾಖೆ ತಕ್ಷಣ ಎಲ್ಲಾ ದೇವಸ್ಥಾನಗಳಲ್ಲಿ ವ್ಯವಸ್ಥಾಪನಾ ಸಮಿತಿ ರಚನೆ ಮಾಡುವಲ್ಲಿ ಕ್ರಮಕೈಗೊಳ್ಳಬೇಕು ಎಂದು ಶಾಸಕರು ಮನವಿ ಮಾಡಿದರು.