Published
5 months agoon
By
Akkare Newsಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಇಂದು ಮಧ್ಯಾಹ್ನ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಮಳೆಯ ಕಾರಣದಿಂದ ಮರವು ರಸ್ತೆಗೆ ಬಿದ್ದಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗಿದೆ.
ಮರ ಬಿದ್ದ ಪರಿಣಾಮವಾಗಿ ಹಲವು ಗಂಟೆಗಳ ಕಾಲ ವಾಹನಗಳು ಕಾಯುವಂತಾಗಿದ್ದು, ಸಂಚಾರಿ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಸಾರ್ವಜನಿಕರು ಮತ್ತು ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಪೊಲೀಸರು ಮತ್ತು ಸ್ಥಳೀಯ ಆಡಳಿತವು ವಾಹನಗಳ ನಿರ್ವಹಣೆಗಾಗಿ ತಾತ್ಕಾಲಿಕ ಮಾರ್ಗಗಳನ್ನು ನೀಡಿದ್ದು, ವಾಹನ ಚಾಲಕರು ತಮ್ಮ ಮಾರ್ಗವನ್ನು ಬದಲಾಯಿಸಲು ಸಲಹೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳು ಮತ್ತು ವ್ಯಾಪಾರಸ್ಥರಿಗೆ ಕೂಡ ಈ ಘಟನೆಯಿಂದ ತೊಂದರೆಯುಂಟಾಗಿದ್ದು, ಅಗತ್ಯ ವಸ್ತುಗಳ ಮತ್ತು ಸೇವೆಗಳ ತಲುಪುವಿಕೆಯಲ್ಲಿ ವಿಳಂಬವಾಗಿದೆ.