Published
5 months agoon
By
Akkare Newsನೆಲ್ಯಾಡಿ, ಜು.13. ಹ್ಯುಂಡೈ ಐ20 ಕಾರು ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ.
ಬೆಂಗಳೂರಿನಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಲಾರಿಯ ನಡುವೆ ಗುಂಡ್ಯ ಸಮೀಪದ ಬರ್ಚಿನಹಳ್ಳ ಎಂಬಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.