ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಶಾಲಾ ಚಟುವಟಿಕೆ

ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಹೊಂದಿದ ಶ್ರೀ ಸುಂದರ ಗೌಡ ಅವರಿಗೆ ಎವಿಜಿ ಶಾಲೆಯಲ್ಲಿ ಅಭಿನಂದನೆ

Published

on

ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಯಾಗಿದ್ದ ಶ್ರೀ ಸುಂದರ ಗೌಡ ಅವರು ಪಧೋನ್ನತಿ ಹೊಂದಿ ರಾಮನಗರ ಜಿಲ್ಲೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಯಾಗಿ ತೆರಳುತ್ತಿರುವ ಈ ಸಂದರ್ಭದಲ್ಲಿ ಪುತ್ತೂರು ಬನ್ನೂರು ಕೃಷ್ಣನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಅಭಿನಂದಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ವೆಂಕಟರಮಣ ಗೌಡ ಕಳುವಾಜೆ ಅವರು ವಹಿಸಿದ್ದರು. ಸನ್ಮಾನಿತರ ಬಗ್ಗೆ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀಯುತ ಗುಡ್ಡಪ್ಪ ಗೌಡ ಬಲ್ಯ ರವರು ಅಭಿನಂದನಾ ಭಾಷಣ ಮಾಡುತ್ತಾ ಶ್ರೀ ಸುಂದರ ಗೌಡ ಅವರ ಪ್ರಾಮಾಣಿಕತೆ, ಕಾರ್ಯ ತತ್ಪರತೆ ಇಲಾಖೆ ಹಾಗೂ ಶಿಕ್ಷಕರ ಬಗ್ಗೆ ಅವರಿಗಿದ್ದ ಆತ್ಮೀಯತೆ, ಸ್ನೇಹಪರತೆ ಇತ್ಯಾದಿಗಳನ್ನು ಕೊಂಡಾಡಿದರು. ಸುಂದರ ಗೌಡ ಅವರು ಇಲಾಖೆಯಆಮೂಲಾಗ್ರ ಮಾಹಿತಿ ಉಳ್ಳವರಾಗಿದ್ದು ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಅತ್ಯಂತ ಯಶಸ್ವಿಯಾಗಿ ಅನೇಕ ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿರುತ್ತಾರೆ.

ಅವರ ಸೇವಾ ನಿಷ್ಠೆಯ ಕಾರಣದಿಂದ ಈಗ ಅವರು ಜಿಲ್ಲಾಮಟ್ಟದ ಅಧಿಕಾರಿಯಾಗಿ ಪದೋನ್ನತಿ ಹೊಂದುತ್ತಿರುವುದು ಅತ್ಯಂತ ಅಭಿನಂದನೀಯ ಎಂದು ಹೇಳಿದರು.

ಸನ್ಮಾನವನ್ನು ಸ್ವೀಕರಿಸಿದ ಶ್ರೀ ಸುಂದರ ಗೌಡರವರು ಮಾತನಾಡುತ್ತಾ ಪುತ್ತೂರು ತಾಲೂಕಿನ ಶಾಲೆ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಯವರ ನಿರ್ದೇಶನದಂತೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಹಕಾರದಿಂದ ಪ್ರಾಮಾಣಿಕ ಕೆಲಸ ಮಾಡುವುದರೊಂದಿಗೆ ನಾನು ಬೆಳೆದಿದ್ದೇನೆ ಎನ್ನುತ್ತಾ ಅಭಿನಂದನೆಯನ್ನು ನೀಡಿದ ಎವಿಜಿ ಶಾಲೆಗೆ ಕೃತಜ್ಞತೆ ಸಲ್ಲಿಸಿದರು.

ಶಾಲಾ ಸಂಚಾಲಕರಾದ ಶ್ರೀ ಎ.ವಿ. ನಾರಾಯಣ, ಸ್ಥಳೀಯ ನಗರಸಭಾ ಸದಸ್ಯರಾದ ಶ್ರೀಮತಿ ಗೌರಿ ಬನ್ನೂರು, ಶಾಲೆಯ ಉಪಾಧ್ಯಕ್ಷರಾದ ಶ್ರೀ ಉಮೇಶ್ ಮಳುವೇಲು ರವರು ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀ ಗಂಗಾಧರ ಗೌಡ, ಶ್ರೀಮತಿ ಪುಷ್ಪಾವತಿ ಕಳುವಾಜೆ, ಶ್ರೀಮತಿ ವನಿತಾ ಎ. ವಿ. ಶಿಕ್ಷಕ ವೃಂದ ಹಾಗೂ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿ ಶ್ರೀಮತಿ ಹರ್ಷಿತಾ ರವರು ಪ್ರಾರ್ಥಿಸಿ, ನಿರ್ದೇಶಕರಾದ ವನಿತಾ ಎ. ವಿ. ಸ್ವಾಗತಿಸಿದರು. ಶಾಲಾ ಶಿಕ್ಷಕಿ ಶ್ರೀಮತಿ ಯಶುಭ ರೈ ರವರು ವಂದನಾರ್ಪಣೆ ಗೈದು, ಶ್ರೀಮತಿ ರಾಧ ರವರು ಕಾರ್ಯಕ್ರಮ ನಿರೂಪಿಸಿದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement