Published
5 months agoon
By
Akkare Newsಮಾಣಿ: ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿರುವುದರಿಂದ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚಾರ ನಡೆಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸರು ಆ ದಾರಿಯಾಗಿ ಬರುವ ವಾಹನ ಸವಾರರಿಗೆ ಮಾಹಿತಿ ನೀಡಿ ಬದಲಿ ರಸ್ತೆಯನ್ನು ಬಳಸುವಂತೆ ತಿಳಿಸುತ್ತಿದ್ದಾರೆ.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.
ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿದಿದ್ದು, ಈ ಹಿನ್ನಲೆ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳನ್ನು ಬದಲಿ ರಸ್ತೆ ಮೂಲಕ ಚಲಿಸುವಂತೆ ಸೂಚಿಸಲಾಗುತ್ತಿದೆ.