Published
5 months agoon
By
Akkare Newsಪುತ್ತೂರು : ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಜು.22 ರಂದು ಬೆಳಗ್ಗೆ ನಿಧನರಾದರು.
ಮೂರು ದಿನಗಳ ಹಿಂದೆ ಮನೆಯಲ್ಲಿ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಸುಂದರ ಅವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.