Published
10 months agoon
By
Akkare Newsಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಎನ್ಡಿಎ ಎಲೈನ್ಸ್ ಬಜೆಟ್ ರೀತಿ ಇದೆ. ಸರ್ಕಾರವನ್ನು ಬಚಾವ್ ಮಾಡುವ ಉದ್ದೇಶದಿಂದ ಮಿತ್ರ ಪಕ್ಷಗಳ ಓಲೈಕೆಗಾಗಿ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದ್ದಾರೆ.
ಸರ್ಕಾರ ರಚನೆಗೆ ಸಹಕರಿಸಿದ ಆಂಧ್ರಪ್ರದೇಶ, ಬಿಹಾರಕ್ಕೆ ಹೆಚ್ಚು ಅನುದಾನ ನೀಡಲಾಗಿದೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಕೊಡುಗೆ ಕೊಡುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತಾದರೂ, ರಾಜ್ಯಕ್ಕೆ ಏನೂ ಸಿಕ್ಕಿಲ್ಲ. ಕರ್ನಾಟಕಕ್ಕೆ ಎಂದಿನಂತೆ ಕೇಂದ್ರ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ತೋರುವುದನ್ನು ಮುಂದುವರಿಸಿದೆ. ವಿಶೇಷವಾಗಿ ಕಾಂಗ್ರೆಸ್ ಆಡಳಿತದಲ್ಲಿರುವ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದಿದ್ದಾರೆ.
ರೈತ ವರ್ಗ, ಬಡ ವರ್ಗಕ್ಕೆ ಯಾವುದೂ ಪ್ರಯೋಜನ ಆಗಿಲ್ಲ, ರೈತರಿಗೆ ಕನಿಷ್ಟ ಬೆಂಬಲ ಬೆಲೆ ಕೊಟ್ಟಿಲ್ಲ. ಮೀನುಗಾರರ ಬಗ್ಗೆಯೂ ಏನೂ ಘೋಷಣೆ ಇಲ್ಲ. ಸಾಮಾನ್ಯ ವ್ಯಕ್ತಿಯ ಆದಾಯವನ್ನು ಸುಧಾರಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ಉಲ್ಲೇಖವಿಲ್ಲ..
.ಕೈಗಾರಿಕಾ, ರೈಲ್ವೆ ಕೃಷಿ ಕ್ಷೇತ್ರಗಳಿಗೆ ಯಾವುದೆ ಕೊಡುಗೆ ಘೋಷಿಸಿಲ್ಲ. ಒಂದೇ ಒಂದು ಸಂತೋಷದ ವಿಷಯವೆಂದರೆ ಕಾಂಗ್ರೆಸ್ 2024ರ ಚುನಾವಣೆ ಸಂದರ್ಭ ತಮ್ಮ ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಯನ್ನು ಈ ಬಜೆಟ್ನಲ್ಲಿ ಪ್ರಸ್ತಾಪಿಸಿದ್ದು. ಒಟ್ಟಾಗಿ ಇದೊಂದು ದೋಸ್ತಿಗಳಿಗೆ ಖುಷಿಪಡಿಸುವ ಆಯವ್ಯಯ ಎಂದೇಳಬೇಕು ಎಂದು ಪದ್ಮರಾಜ್ ಪ್ರತಿಕ್ರಿಸಿದ್ದಾರೆ.