ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕರ್ನಾಟಕದ 29 ತಾಲೂಕುಗಳಿಗೆ ಡೇಂಜರ್ ಝೋನ್! ಕರಾವಳಿಯ ಹಲವು ತಾಲೂಕುಗಳಲ್ಲಿ ಭೂಕುಸಿತದ ಭೀತಿ!

Published

on

Karnataka: ಕರ್ನಾಟಕದ ಮಲೆನಾಡು ಮತ್ತು ಕರಾವಳಿ (Karnataka) ಭಾಗದ 29 ತಾಲೂಕಿನ ಹಲವು ಕಡೆಗಳಲ್ಲಿ ಕೇರಳದ ವಯನಾಡಿನ ರೀತಿಯಲ್ಲೇ ಭೂಕುಸಿತ ಸಂಭವಿಸುವ ಅಪಾಯವಿದೆ. ಹೌದು ಭಾರೀ ಮಳೆ, ನೈಸರ್ಗಿಕವಾಗಿ ನೀರು ಹರಿಯುವಿಕೆಗೆ ತಡೆ, ಇಳಿಜಾರು ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿಯುವುದು, ಗುಡ್ಡ ಸೇರಿದಂತೆ ಇಳಿಜಾರು ಪ್ರದೇಶದಲ್ಲಿ ಅರಣ್ಯ ನಾಶ ಮಾಡುವುದರಿಂದ ಭೂಕುಸಿತವಾಗುತ್ತಿದ್ದು, ರಾಜ್ಯ ಸರ್ಕಾರ ಮತ್ತು ಜನತೆ ಈಗಲೇ ಎಚ್ಚೆತ್ತುಕೊಂಡು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ.

 

ಈಗಾಗಲೇ ಮಳೆಗಾಲದ ಸಂದರ್ಭದಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಉಂಟಾಗುವ ಭೂಕುಸಿತಕ್ಕೆ ಕಾರಣ ಹಾಗೂ ಅದನ್ನು ತಡೆಯುವ ಸಲುವಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು 2022ರಲ್ಲಿ ಭೂಕುಸಿತ ನಿರ್ವಹಣೆಗಾಗಿ ಕ್ರಿಯಾಯೋಜನೆ ರೂಪಿಸಿತ್ತು. ಇದಕ್ಕೆ ತಕ್ಕಂತೆ ಸರ್ಕಾರ ಈವರೆಗೆ ಸಮರ್ಪಕ ಕ್ರಮ ಕೈಗೊಂಡಿಲ್ಲ. ಹೀಗಾಗಿ 2022ರಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ 55 ಕಡೆಗಳಲ್ಲಿ ಭೂಕುಸಿತ ಉಂಟಾಗಿತ್ತು.

ಆದರೆ, ಈ ಬಾರಿ ಮಳೆಯ ಪ್ರಮಾಣ ತೀವ್ರವಾಗಿರುವ ಕಾರಣದಿಂದಾಗಿ ಹೆಚ್ಚಿನ ಕಡೆಗಳಲ್ಲಿ ಗುಡ್ಡ ಮತ್ತು ಭೂಕುಸಿತ ಉಂಟಾಗಿದೆ. ಅಲ್ಲದೆ, ಭೂಕುಸಿತ ನಿರ್ವಹಣೆಗಾಗಿ ರೂಪಿಸಲಾಗಿದ್ದ ರಾಜ್ಯ ಕ್ರಿಯಾಯೋಜನೆಯಲ್ಲಿರುವಂತೆ ಭೂಕುಸಿತವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ 29 ತಾಲೂಕಿನ ಹಲವೆಡೆ ಭೂಕುಸಿತ ಪ್ರಮಾಣ ಹೆಚ್ಚುವ ಆತಂಕವಿದೆ.

ಭೂಕುಸಿತದ ಭೀತಿ ಇರುವ ಜಿಲ್ಲೆ, ತಾಲೂಕುಗಳು:ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಹೊನ್ನಾವರ, ಕಾರವಾರ, ಕುಮಟಾ, ಸಿದ್ದಾಪುರ, ಶಿರಸಿ, ಸೂಪಾ, ಯಲ್ಲಾಪುರ,

ಉಡುಪಿ ಜಿಲ್ಲೆಯ ಹೆಬ್ರಿ, ಕಾರ್ಕಳ, ಬೈಂದೂರು, ಕುಂದಾಪುರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ, ಹೊಸನಗರ

ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಕಡಬ, ಸುಳ್ಯ, ಪುತ್ತೂರು

ಚಿಕ್ಕಮಗಳೂರು ಜಿಲ್ಲೆಯ ಚಿಕ್ಕಮಗಳೂರು, ಮೂಡಿಗೆರೆ, ಎನ್‌ಆರ್‌ ಪುರ, ಶೃಂಗೇರಿ ಹಾಗೂ

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕುಗಳು ಭೂಕುಸಿತದ ಭೀತಿಯಲ್ಲಿವೆ.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿಯಂತೆ 2009ರ ಜನವರಿಯಿಂದ 2021ರ ಡಿಸೆಂಬರ್‌ವರೆಗೆ ರಾಜ್ಯದಲ್ಲಿ 1,272 ಕಡೆಗಳಲ್ಲಿ ಭೂಕುಸಿತ ಉಂಟಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗುವಂತಾಗಿದೆ. ಹೀಗೆ 13 ವರ್ಷಗಳಲ್ಲಿ ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ 439 ಕಡೆಗಳಲ್ಲಿ ಭೂಕುಸಿತ ಉಂಟಾಗಿದೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement