Published
5 months agoon
By
Akkare Newsಬೆಂಗಳೂರುನಲ್ಲಿ (Bengaluru) ಬಿಎಂಟಿಸಿ (BMTC) ಎಲೆಕ್ಟ್ರಿಕ್ ಬಸ್ (Electric Bus) ಬೆಂಕಿಗಾಹುತಿಯಾದ (Fire) ಘಟನೆ ನಾಗವಾರ – ಹೆಬ್ಬಾಳ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.
ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ (Heavy Rain) ಸರ್ವೀಸ್ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ತುಂಬಿತ್ತು.
ಈ ವೇಳೆ ಅದೇ ಮಾರ್ಗವಾಗಿ ಬಂದ ಎಲೆಕ್ಟ್ರಿಕ್ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ
ಸರ್ವೀಸ್ ರಸ್ತೆಯಲ್ಲಿ ತುಂಬಿದ್ದ ನೀರಿನಲ್ಲಿ ಹೋಗುತ್ತಿದ್ದ ವೇಳೆ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ತಕ್ಷಣ ಚಾಲಕ ಮತ್ತು ನಿರ್ವಾಹಕ ಪ್ರಯಾಣಿಕರನ್ನ ಇಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
‘
ಅಗ್ನಿಶಾಮಕ ವಾಹನ ಸ್ಥಳಕ್ಕೆ ತಲುಪುವ ವೇಳೆಗೆ ಬಸ್ ಬೆಂಕಿಗಾಹುತಿಯಾಗಿದೆ. ನಂತರ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದ ಬಸ್ಗೆ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಹೆಬ್ಬಾಳ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.