Published
5 months agoon
By
Akkare Newsಹಲವು ದಿನಗಳ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಕಾರಣ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ನೀಡಿದೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರೀ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಲಾಗಿದೆ. ವಾಹನ ಓಡಾಟದ ಕುರಿತು ಸಕಲೇಶಪರ ಎಸಿ ಶೃತಿ ಅವರು ಮಾಹಿತಿ ನೀಡಿದ್ದಾರೆ. ಹಾಗೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ರೆಸ್ಕ್ಯೂ ಟೀಂ ನಿಯೋಜನೆ ಮಾಡಲಾಗಿದೆ. ದಿನದ 24 ಗಂಟೆಯೂ ಎನ್ಹೆಚ್ ಟೀಂ ಸ್ಥಳದಲ್ಲಿ ಇರಲಿದೆ ಎಂದು ಅವರು ಹೇಳಿದ್ದಾರೆ.
.
.