Published
4 months agoon
By
Akkare Newsನಳೀಲು : ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಹದಿನೈದನೇ ವರ್ಷದ ಗಣೇಶೋತ್ಸವ- (ಮೂರೈದು- ಹದಿನೈದರ ಹುತ್ತರಿ) ಸೆ.7 ಮತ್ತು 8 ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ರವಿವಾರ ನಳೀಲು ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಬಿಡುಗಡೆಗೊಳಿಸಲಾಯಿತು.
ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಕ್ಷೇತ್ರದ ಅರ್ಚಕ ಪ್ರವೀಣ್ ಶಂಕರ್ ಅವರು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ತಾರಾನಾಥ ಕುಂಡಡ್ಕ, ಕಾರ್ಯದರ್ಶಿ ರಾಮಚಂದ್ರ ಚೆನ್ನಾವರ, ಮಾಜಿ ಅಧ್ಯಕ್ಷರಾದ ಪೂವಪ್ಪ ನಾಯ್ಕ ಕೊಂಡೆಪ್ಪಾಡಿ, ಜಯಂತ ಗೌಡ ಕುಂಡಡ್ಕ, ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು ಮೊದಲಾದವರು ಉಪಸ್ಥಿತರಿದ್ದರು.