Published
4 months agoon
By
Akkare Newsಪುತ್ತೂರು: ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಏಣೆ ಖರ್ಗೆ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ -ದೆ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ “ದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ನ್ ಗ್ರಂಥಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ.
ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 2. ಗ್ರಾಮಮಟ್ಟದ ಗ್ರಂಥಾಲಯಗಳನ್ನು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದು ಹೇಳಿದರು.
ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು ಎಂದು ಹೇಳಿದರು. ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ.
ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ 6000ಕ್ಕೂ ಹೆಚ್ಚು ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.