Published
4 months agoon
By
Akkare Newsಪುತ್ತೂರು : ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣ ನಡೆಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಅಹ್ಮದ್ ಹಾಜಿ ಆಕರ್ಷಣ್ ಅವರು,ನಮ್ಮ ಹಿರಿಯರು ಜಾತಿ ,ಧರ್ಮ ಭೇದವಿಲ್ಲದೆ ನಡೆಸಿದ ಒಗ್ಗಟ್ಟಿನ ಹೋರಾಟದ ಫಲವಾಗಿ ನಾವಿಂದು ಸ್ವಾತಂತ್ರ್ಯೋತ್ಸವದ ಸವಿಯನ್ನು ಅನುಭವಿಸುತ್ತಿದ್ದೇವೆ.
ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್ ಮಾತನಾಡಿ, ದೇಶಕ್ಕಾಗಿ ಬಲಿದಾನ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕೆಂದು ಹೇಳಿದರು.
ಸಂಸ್ಥೆಯ ಸಂಚಾಲಕರಾದ ಹಾಜಿ ಮುಹಮ್ಮದ್ ಸಾಬ್ ಅವರು ಮಾತನಾಡಿ, ವಿದ್ಯಾರ್ಥಿಗಳು ಪೂರ್ವಿಕರ ಆದರ್ಶಗಳಿಂದ ಪ್ರೇರಣೆ ಪಡೆದು ದೇಶ ಪ್ರೇಮವನ್ನು ಮೈಗೂಡಿಸಿ ಕೊಂಡು ಸಾಧನೆಗಳ ಮೂಲಕ ಕೀರ್ತಿಯನ್ನು ತರಬೇಕೆಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ, ಟ್ರಸ್ಟಿಗಳಾದ ಯೂಸುಫ್ ಹಾಜಿ , ಇಬ್ರಾಹಿಂ ಹಾಜಿ, ಮೌಂಟನ್ ವ್ಯೂ ಅಸ್ವಾಲಿಹಾ ವುಮೆನ್ಸ್ ಕಾಲೇಜ್ ನ ಉಸ್ತಾದ್ ಕೆ.ಎಂ.ಎ.ಕೊಡುಂಗಾಯಿ ಫಾಝಿಲ್ ಹನೀಫಿ, ಸಾಲ್ಮರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮೋಹನಾಂಗಿ, ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿಭಾಗದ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷರಾದ ಇಸ್ಮಾಯಿಲ್, ಉಸ್ಮಾನ್, ಉಪಾಧ್ಯಕ್ಷೆ ಸಫ್ವಾನ,ಮೊದಲಾದವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ ಝುಲೈಖಾಬಿ ಕಾರ್ಯಕ್ರಮದ ಆರಂಭದಲ್ಲಿ ಸ್ವಾಗತಿಸಿದರು.
ಶಿಕ್ಷಕರಾದ ರವೂಫ್ ಕಾರ್ಯಕ್ರಮ ನಿರ್ವಹಿಸಿ, ಮಂಜುನಾಥ ರೈ ವಂದಿಸಿದರು.
ದೈಹಿಕ ಶಿಕ್ಷಕರಾದ ಅಶ್ರಫ್ ಮತ್ತು ಜಯರಾಮ್ ಸಹಕರಿಸಿದರು.
ಸಂಸ್ಥೆಯ ಶಿಕ್ಷಕ ವೃಂದ ಮತ್ತು ಶಿಕ್ಷೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.