Published
4 months agoon
By
Akkare Newsಪುತ್ತೂರು: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 78 ವರ್ಷಗಳಾಗಿದ್ದು, ಇಂದು 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮವನ್ನು ಆಚರಿಸುತ್ತಿದ್ದು, ಯುವಜನತೆ 78 ವರ್ಷಗಳಲ್ಲಿ ದೇಶದಲ್ಲಿ ಆದ ಅಭಿವೃದ್ದಿಯ ಕುರಿತು ಚಿಂತಿಸದೆ ದೇಶದ ಮುಂದಿನ ಪ್ರಗತಿಯ ಕುರಿತು ಚಿಂತಿಸಬೇಕಾದ ಅಗತ್ಯವಿದೆ ಎಂದು ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.
ಬ್ರಿಟಿಷರ ಆಳ್ವಿಕೆಯಲ್ಲಿದ್ದ ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದು ಐತಿಹಾಸಿಕ, ಭಾವನಾತ್ಮಕ ಕ್ಷಣ. ನಮ್ಮ ಹಿರಿಯರ ತ್ಯಾಗ, ಬಲಿದಾನಗಳ, ಹೋರಾಟಗಳ ಮೂಲಕ ಸ್ವಾತಂತ್ರ್ಯ ಲಭಿಸಿದೆ.
ಈ ಸಂದರ್ಭ ಅವರ ವಿರುದ್ಧದ ಹೋರಾಟದಲ್ಲಿ ಸುಮಾರು 16.50 ಕೋಟಿ ಭಾರತೀಯರು ಪ್ರಾಣ ಕಳೆದುಕೊಂಡಿದ್ದರು ಎಂದು ತಿಳಿಸಿದ ಅವರು, ರಾಷ್ಟ್ರಪ್ರೇಮದೊಂದಿಗೆ ಮುಂದಿನ ದೇಶದ ಪ್ರಗತಿ ಯುವಜನತೆಯ ಮೇಲಿದೆ ಎಂದು ತಿಳಿಸಿದರು.