Published
4 months agoon
By
Akkare Newsಪುತ್ತೂರು: ಬನ್ನೂರಿನ ಕೃಷ್ಣ ನಗರದ ಎವಿಜಿ ಇಂಗ್ಲೀಷ್ ಮೀಡಿಯಂ ಶಾಲೆಯಲ್ಲಿ ಗುರುವಾರದಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಸುಂದರ ಬಿ ರವರು ರಾಷ್ಟ್ರಧ್ವಜಾರೋಹಣವನ್ನು ನೆರವೇರಿಸಿ ,ಮಕ್ಕಳು ರಾಷ್ಟ್ರಧ್ವಜ ಗೀತೆ, ರಾಷ್ಟ್ರ ಗೀತೆ ಹಾಗೂ ನಮ್ಮ ಮಾತೃಭೂಮಿಗೆ ಗೌರವ ಸೂಚಿಸುವಂತೆ ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಲಕ್ಷ್ಮಣ ಗೌಡ ಕಂಬಳದಡ್ಡ ಉಪಸ್ಥಿತರಿದ್ದು ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸಿ ಹಾಗೂ ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಯುತ ವೆಂಕಟರಮಣ ಗೌಡ ಕಳುವಾಜೆ ವಹಿಸಿದ್ದು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು
ವೇದಿಕೆಯಲ್ಲಿ ಶಾಲಾ ಉಪಾಧ್ಯಕ್ಷರಾದ ಶ್ರೀ ಉಮೇಶ್ ಗೌಡ ಮಳುವೇಲು, ಸಂಚಾಲಕರಾದ ಶ್ರೀ ಎ ವಿ ನಾರಾಯಣ ,ನಿರ್ದೇಶಕರಾದ ಶ್ರೀ ಮನೋಹರ ರೈ ಉಪಸ್ಥಿತರಿದ್ದರು.
ಶ್ರೀ ಎ ವಿ ನಾರಾಯಣ ಹಾಗೂ ಉಮೇಶ್ ಗೌಡ ಮಳುವೇಲು ಹಾಗೂ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಸೌಮ್ಯಶ್ರೀ ಹೆಗಡೆ ಹಾಗೂ ಶಿಕ್ಷಕಿ ಪ್ರಕ್ಷುತ ವಿದ್ಯಾರ್ಥಿ ನಾಯಕ ಅದ್ವಿಕ್ ಬಂಜನ್ ರವರು ಸ್ವಾತಂತ್ರ್ಯದ ಬಗ್ಗೆ ಮಾತನಾಡಿ ದೇಶ ಪ್ರೇಮದ ಬಗ್ಗೆ ತಿಳಿಸುತ್ತಾ ಭಾವಿ ಪ್ರಜೆಗಳಾದ ಮಕ್ಕಳು ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಸುಂದರ ಬಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ನಿರ್ದೇಶಕರಾದ ಶ್ರೀಮತಿ ಪ್ರತಿಭಾ ದೇವಿ, ಡಾ. ಅನುಪಮಾ, ಶ್ರೀಗಂಗಾಧರ ಗೌಡ, ಶ್ರೀ ವಾಮನ ಗೌಡ, ಬೋಧಕ ಹಾಗೂ ಬೋಧಕೇತರ ವೃಂದ, ಪೋಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.
ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸವಿತಾ ಕುಮಾರಿಯವರು ಸ್ವಾಗತಿಸಿ ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಡಿದರು. ಶಿಕ್ಷಕಿ ಶ್ರೀಮತಿ ರಾಧಾ ರವರು ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚಿಸಿದರು
ಹಾಗೂ ಶ್ರೀಮತಿ ಹರ್ಷಿತ ವಂದನಾರ್ಪಣೆ ಶ್ರೀಮತಿ ಯಶುಭಾ ರೈ ಕಾರ್ಯಕ್ರಮ ನಿರೂಪಿಸಿದರು.