Published
4 months agoon
By
Akkare Newsಪುತ್ತೂರು: ಕೊಂಬೊಟ್ಟುವಿನಲ್ಲಿ ಬಾಲಕಿ ಮೇಲೆ ಬ್ಲೇಡ್ ನಿಂದ ಗಾಯಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಕರಾವಳಿ ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಹೈಡ್ರಾಮ ಪ್ರಕರಣ- ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹೇಳಿದ್ದೇನು..?
ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಮಂಗಳವಾರ ಬೆಳಿಗ್ಗೆ ಸುಮಾರು 8.30 ಕ್ಕೆ ಈ ಘಟನೆ ನಡೆದಿದೆ. ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ಬಾಲಕಿ ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಿಸಲಾಗಿದೆ.
ಹಲ್ಲೆಗೊಳಗಾದ ಬಾಲಕಿ ಕಾಲೇಜಿಗೆ ತೆರಳುವ ಮಧ್ಯೆ ಅದೇ ಕಾಲೇಜಿನ ಬಾಲಕ ಬ್ಲೇಡ್ ನಿಂದ ಕೈಗೆ ಗೀರಿ ಹಲ್ಲೆ ನಡೆಸಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿ ಪೋಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
ಸೂಕ್ತ ತನಿಖೆ ನಡೆಸಿ ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗುವುದು, ವೈಜ್ಞಾನಿಕವಾಗಿ, ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ಹೇಳಿದ ಅವರು ಪ್ರಕರಣ ತನಿಖೆ ಹಂತದಲ್ಲಿರುವ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಇನ್ನಷ್ಟೇ ಕಲೆ ಹಾಕಬೇಕಿದೆ. ತನಿಖೆ ಮುಗಿದ ಬಳಿಕವಷ್ಟೇ ಎಲ್ಲಾ ಮಾಹಿತಿಯನ್ನು ನೀಡಲಾಗುವುದು.
ಸದ್ಯ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.