Published
9 months agoon
By
Akkare Newsಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.
ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಐವನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.