Published
4 months agoon
By
Akkare Newsಪುತ್ತೂರು: ಕೊಂಬೆಟ್ಟು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಯೋರ್ವಳ ಕೈಗೆ ಬ್ಲೇಡಿನಿಂದ ತರಚಿದ ಘಟನೆಯ ಬಗ್ಗೆ ಕೂಲಂಕುಶವಾಗಿ , ನ್ಯಾಯಯುತವಾಗಿ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಪುತ್ತೂರು ಶಾಸಕರು ಸೂಚನೆಯನ್ನು ನೀಡಿದ್ದಾರೆ.
ಭಾನುವಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಹಾಗೂ ವಿದ್ಯಾರ್ಥಿ ಮನೆಗೆ ಶಾಸಕರು ಭೇಟಿ ನೀಡಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಅವರ ಮನೆಯವರಿಂದ ಮಾಹಿತಿ ಪಡೆದುಕೊಂಡರು. ಇಬ್ಬರು ವಿದ್ಯಾರ್ಥಿಗಳ ಮನೆಗೆ ಬತೆರಳಿದ ಶಾಸಕರು ಇಬ್ಬರಲ್ಲೂ ಸುಮಾರು ಒಂದು ಗಂಟೆಗಳ ಕಾಲ ಮಾಹಿತಿ ಪಡೆದ ಶಾಸಕರು ನಡೆದ ಘಟನೆಯ ಬಗ್ಗೆ ಅವರಿಂದಲೇ ಮಾಹಿತಿ ಪಡೆದುಕೊಂಡರು.
ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರಲ್ಲಿ ಮಾತನಾಡಿದ ಶಾಸಕರು ಕಾಲೇಜಿನಲ್ಲಿ ಏನು ಘಟನೆ ನಡೆದಿದೆಯೋ ಅದರ ಬಗ್ಗೆ ಕೂಲಂಕುಶವಾಗಿ, ನ್ಯಾಯಯುತವಾಗಿ ತನಿಖೆ ನಡೆಸಬೇಕು. ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲ. ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರಗೆಡವಬೇಕು ಘಟನೆಯ ಬಗ್ಗೆ ಜನರಲ್ಲಿ ಯಾವುದೇ ಸಂಶಯ ಸೃಷ್ಟಿಯಾಗಬಾರದು.
ಅದು ಹಾಗೆ ಆಗಿತ್ತು ಇದು ಹೀಗೆ ಆಗಿತ್ತು. ಅವನದ್ದು ತಪ್ಪು, ಇವಳದ್ದು ತಪ್ಪು ಎಂದು ಜನರು ಸೋಶಿಯಲ್ ಮೀಡಿಯಾದಲ್ಲಿ ಪರಸ್ಪರ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಆ ದಿನ ಏನು ಘಟನೆ ನಡೆದಿದೆಯೋ ಅದನ್ನು ಪೂರ್ಣವಾಗಿ ತನಿಖೆ ನಡೆಸಬೇಕು. ತನಿಖೆ ನಡೆಸಲು ಪೊಲೀಸ್ ಇಲಾಖೆಗೆ ಏನು ಸಹಕಾರ ಬೇಕೋ ಅದೆಲ್ಲವನ್ನೂ ಒದಗಿಸಲಾಗುವುದು.
ವಿದ್ಯಾರ್ಥಿಗಳಿಬ್ಬರ ಹೇಳಿಕೆಯನ್ನು ಪೊಲೀಸ್ ಇಲಾಖೆ ಪರಿಗಣಿಸಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಖಡಕ್ ಸೂಚನೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ಕಬಕ ವಲಯ ಕಾಂಗ್ರೆಸ್ ಅಧ್ಯಕ್ಷರಾದ ನಾಸಿರ್ ಕೋಲ್ಪೆ, ಕಾಂಗ್ರೆಸ್ ಮುಖಂಡರಾದ ರೋಶನ್ ರೈ ಬನ್ನೂರು ಮತ್ತಿತರರು ಉಪಸ್ಥಿತರಿದ್ದರು.