Published
4 months agoon
By
Akkare News
ಮುಖ್ಯವಾಗಿ ಅಂತರಾಷ್ಟ್ರೀಯ ಮಾರುಕಟ್ಟೆ ಅನುಗುಣವಾಗಿ ಸ್ಥಳೀಯವಾಗಿ ರೋಬಸ್ಟಾ ಕಾಫಿಗೆ ಮಾರುಕಟ್ಟೆ ದರ ವಂಚಿತವಾಗಿರುವ ಬೆಳೆಗಾರರ ಸಮಸ್ಯೆ ಬಗ್ಗೆ ಸಂಸದರಿಗೆ ಮನವರಿಕೆ ಮಾಡಲಾಯಿತು
ಇದರ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆದು ಈ ಬಗ್ಗೆ ಕೇಂದ್ರ ವಾಣಿಜ್ಯ ಸಚಿವರ ಗಮನಕ್ಕೆ ತಂದು, ಸಚಿವರು ಹಾಗೂ ಕೊಡಗು ಸಂರಕ್ಷಣಾ ವೇದಿಕೆಯ ನಿಯೋಗದೊಂದಿಗೆ ಸಭೆ ನಡೆಸಿ ಈ ಸಮಸ್ಯೆಗೆ ಪರಿಹಾರ ಕಂಡು ಕಂಡುಕೊಳ್ಳಲು ನಿರ್ಧರಿಸಲಾಯಿತು.
ಭಾರತೀಯ ಕಾಫಿ ಮಂಡಳಿಯೊಂದಿಗೆ ಈ ಬಗ್ಗೆ ಮತ್ತು ಬೆಳೆಗಾರರು ಎದುರಿಸುತ್ತಿರುವ ಇತರ ಸಮಸ್ಯೆಗಳ ಬಗ್ಗೆ ಪರಿಹಾರಕ್ಕಾಗಿ ನೇರ ಮಾತುಕತೆಗೆ ವೇದಿಕೆ ಕಲ್ಪಿಸುವುದಾಗಿ ಈ ಬಗ್ಗೆ ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಕಾಫಿ ಸಮ್ಮೇಳನದಲ್ಲಿ ಪ್ರತ್ಯೇಕ ವೇದಿಕೆ ನಿರ್ಮಿಸಿ ಈ ವಿಚಾರದ ಬಗ್ಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಭರವಸೆ ನೀಡಿದರು.