Published
4 months agoon
By
Akkare News
ಕಡಬ ತಾಲೂಕಿನ ಕುಂತೂರು ಎಂಬಲ್ಲಿ ಸರಕಾರಿ ಶಾಲೆಯ ಕಾಮಗಾರಿ ನಡೆಯುತ್ತಿದ್ದರೂ ಶಿಕ್ಷಕರು ಮಕ್ಕಳನ್ನು ಕಟ್ಟಡದ ಒಳಗಡೆ ಕೂರಿಸಿದ್ದರು.
ಕಟ್ಟಡ ಕುಸಿದ ಸಂದರ್ಭದಲ್ಲಿ ಮಕ್ಕಳು ಆಟವಾಡಲು ಹೊರಗಡೆ ಹೋದದ್ದರಿಂದ ಭಾರೀ ದುರಂತವೊಂದು ತಪ್ಪಿದ್ದು, ನಾಲ್ವರು ಮಕ್ಕಳಿಗೆ ಗಾಯಗಳಾಗಿವೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂತೂರು ಸರಕಾರಿ ಶಾಲೆಯ ಕೊಠಡಿಯ ಮೇಲ್ಪಾವಣಿ ಹಾಗೂ ಗೋಡೆ ಕುಸಿದಿದ್ದು, ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಈ ಬಗ್ಗೆ ಪುತ್ತೂರು ಬಿಇಓ ಮಾಹಿತಿ ಪಡೆಯುತ್ತಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.