ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಶಾಸಕ ಹರೀಶ್ ಪೂಂಜರಿಂದ ಅರಣ್ಯ ಅಧಿಕಾರಿಗಳಿಗೆ ಅವ್ಯಚ ಶಬ್ದಗಳಿಂದ ನಿಂದನೆ, ಅಧಿಕಾರಿಗಳಿಂದ ದೂರು, ಶಾಸಕರ ಬಂಧನ ಆಗುವ ಸಾಧ್ಯತೆ…!!

Published

on

ಬೆಳ್ತಂಗಡಿ : ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದನ್ನು ತೆರವುಗೊಳಿಸಲು ಉಪ್ಪಿನಂಗಡಿ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾದಾಗ ಬೆಳ್ತಂಗಡಿ ಶಾಸಕರು ಕರ್ತವ್ಯಕ್ಕೆ ಅಡ್ಡಿಪಡಿಸಿ ಉಪ್ಪಿನಂಗಡಿ ಅರಣ್ಯಾಧಿಕಾರಿಗೆ ನಿಂದನೆ ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಯಾವುದೇ ಕ್ಷಣಗಳಲ್ಲಿ ಹರೀಶ್ ಪೂಂಜ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

 

 

ಘಟನೆಯ ವಿವರ: ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಅಮ್ಮಿನಡ್ಕದ ಅರಣ್ಯ ಇಲಾಖೆಗೆ ಸೇರಿದ ಮೀಸಲು ಅರಣ್ಯ ಪ್ರದೇಶದ ಜಾಗದಲ್ಲಿ ಲೋಲಾಕ್ಷ ಎಂಬಾತ ಅಕ್ರಮವಾಗಿ ಮನೆ ನಿರ್ಮಿಸಲು ಫೌಂಡೇಷನ್ ಹಾಕಿದ್ದು ಅದನ್ನು ಉಪ್ಪಿನಂಗಡಿ ಅರಣ್ಯ ಇಲಾಖೆ ಆಕ್ಟೋಬರ್ 6 ರಂದು ಕಿತ್ತೆಸಗಿದ್ದು ಇದರ ಮಾಹಿತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಕ್ಟೋಬರ್ 7 ರಂದು ಸ್ಥಳಕ್ಕೆ ಬಂದು ಸ್ಥಳೀಯರ ಸಹಕಾರದೊಂದಿಗೆ ಮನೆ ನಿರ್ಮಿಸಿ ಗೃಹಪ್ರವೇಶ ಮಾಡಿಹೋಗಿದ್ದರು. ಇದರ ಬಗ್ಗೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಅಕ್ಟೋಬರ್ 9 ರಂದು ತೆರವು ಮಾಡಲು ಮುಂದಾದಾಗ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾಹಿತಿ ತಿಳಿದು ದಕ್ಷಿಣ ಕನ್ನಡದ ಬಿಜೆಪಿ ಶಾಸಕರೊಂದಿಗೆ ಮನೆ ತೆರವಿಗೆ ವಿರೋಧ ವ್ಯಕ್ತಪಡಿಸಿದ್ದರು. ಈ ವೇಳೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ ಕೆ ಗೆ ಅವಾಚ್ಯ ಶಬ್ದದಿಂದ ನಿಂದನೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿದ್ದರು.ಘಟನೆ ವೇಳೆ ದೊಡ್ಡ ಹೈಡ್ರಾಮವೇ ನಡೆದಿತ್ತು. ಈ ಬಗ್ಗೆ ಅರಣ್ಯಾಧಿಕಾರಿ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

 

ಶಾಸಕ ಪೂಂಜರನ್ನು ಬಂಧಿಸಲು ಸರ್ಕಸ್ : ಇನ್ನೂ ಪ್ರಕರಣ ದಾಖಲಾಗಿರುವ ಬಗ್ಗೆ ಕಾಂಗ್ರೆಸ್ ಪಕ್ಷದವರು ಬಿಜೆಪಿ ಶಾಸಕ ಹರೀಶ್ ಪೂಂಜ ರನ್ನು ಬಂಧಿಸಲು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಗೃಹಸಚಿವರು ದಕ್ಷಿಣ ಕನ್ನಡ ಪೊಲೀಸರಿಗೆ ಶಾಸಕರನ್ನು ಬಂಧಿಸಲು ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ಸಿಕ್ಕಿದೆ‌‌.

 

ಅರಣ್ಯಾಧಿಕಾರಿಯ ದೂರಿನ ಸಾರಾಂಶ: ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಸರ್ವೆ ನಂಬ್ರ 309 ರಲ್ಲಿ ಲೋಲಾಕ್ಷ ಗೌಡ ಎಂಬವರು ಮೀಸಲು ಅರಣ್ಯ ಪ್ರದೇಶಕ್ಕೆ ಅತಿಕ್ರಮ ಮಾಡಿ ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಸ್ಥಳಕ್ಕೆ ಉಪ್ಪಿನಂಗಡಿ ಅರಣ್ಯಾಧಿಕಾರಿ ಹಿರಿಯ ಅಧಿಕಾರಿಗಳ ಸೂಚನೆಯಂತೆ ಸ್ಥಳಕ್ಕೆ ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿಯೊಂದಿಗೆ ದಿನಾಂಕ 09-10-2023 ರಂದು ಬೆಳಗ್ಗೆ 7:45 ಕ್ಕೆ ಭೇಟಿ ನೀಡಿದ್ದು, ಲೋಲಾಕ್ಷ ಗೌಡ ಎಂಬವರು ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣ ಮಾಡಲು ಪೌಂಡೇಶನ್ ಹಾಕಿರುವುದು ಕಂಡುಬಂದಿದ್ದು ಕೂಡಲೇ ನಿವೇಶನವನ್ನು ತೆರವು ಮಾಡುವಂತೆ ಲೋಲಾಕ್ಷ ಗೌಡ ಅವರಿಗೆ ಸೂಚಿಸಿದ್ದು ತೆರವುಗೊಳಿಸದೆ ಇರುವುದರಿಂದ ಸದ್ರಿ ಪೌಂಡೇಶನನ್ನು ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಇತರ ಅರಣ್ಯ ಇಲಾಖಾ ಅಧಿಕಾರಿ ಮತ್ತು ಸಿಬ್ಬಂದಿ ಮುಖಾಂತರ ತೆರವುಗೊಳಿಸಲು ಮುಂದಾಗಿದ್ದು, ಆ ಸಮಯ ಬೆಳ್ತಂಗಡಿ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ತಮ್ಮ ಬೆಂಬಲಿಗರೊಂದಿಗೆ ಸೇರಿ ಫೌಂಡೇಶನ್ ಅನ್ನು ತೆರವುಗೊಳಿಸಲು ಅರಣ್ಯ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿ ತಡೆದಿದ್ದು ಅಲ್ಲದೆ ಬೆಳ್ತಂಗಡಿ ತಾಲೂಕಿನ ಮಾನ್ಯ ವಿಧಾನಸಭಾ ಸದಸ್ಯರಾದ ಹರೀಶ್ ಪೂಂಜಾರವರು ಅಧಿಕಾರಿಗಳ ಸಮ್ಮುಖದಲ್ಲಿ ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅವರನ್ನು ಅವಾಚ್ಯ ಪದವನ್ನು ಬಳಸಿ ನಿಂದಿಸಿದ್ದಾರೆ. ಅಲ್ಲದೇ ಕಟ್ಟಡವನ್ನು ತೆರವುಗೊಳಿಸಿದ್ದಲ್ಲಿ ಗಂಭೀರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿರುತ್ತಾರೆ. ಆದುದರಿಂದ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ ಹರೀಶ್ ಪೂಂಜಾ ಶಾಸಕರು ಬೆಳ್ತಂಗಡಿ ತಾಲೂಕು ಆತನ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಕೋರಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಹಾಗೂ ಕಾನೂನು ಸಲಹೆ ಪಡೆದು ಅಕ್ಟೋಬರ್ 13 ರಂದು ತಡವಾಗಿ ಠಾಣೆಗೆ ಬಂದು ದೂರು ನೀಡಿದ್ದಾರೆ‌.

 

ಎಫ್ಐಆರ್ ದಾಖಲು: ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ನೀಡಿದ ದೂರಿನ ಮೇರೆಗೆ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಧರ್ಮಸ್ಥಳ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement