ಪುತ್ತೂರು : ಮುಂಬರುವ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳ ಆಚರಣೆಗೆ ಸಂಬಂಧಿಸಿದಂತೆ ಧಾರ್ಮಿಕ ಮುಖಂಡರ ಜೊತೆ ಪುತ್ತೂರು ನಗರ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.
ನಗರಠಾಣಾ ಇನ್ಸ್ಪೆಕ್ಟರ್ ಸತೀಶ್ ಜಿ.ಜೆ., ಎಸ್.ಐ ಆಂಜನೇಯ ರೆಡ್ಡಿ, ಸಂಚಾರ ಪೊಲೀಸ್ ಠಾಣಾ ಎಸ್.ಐ ಉದಯರವಿ ಮಾತನಾಡಿ ಶಾಂತಿಯುತವಾಗಿ ಹಬ್ಬಗಳ ಆಚರಣೆ ನಡೆಸಿಕೊಡುವಂತೆ ಹಾಗೂ ಅಹಿತಕರ ಘಟನೆಗಳಿಗೆ ಅವಕಾಶಕೊಡದಂತೆ ಸಂಘಟಕರಲ್ಲಿ ವಿನಂತಿಸಿದರು.
ಹಲವು ಪ್ರಮುಖರು ಈ ವೇಳೆ ಉಪಸ್ಥಿತರಿದ್ದು, ಸಲಹೆ ಸೂಚನೆ ನೀಡಿದರು.