Published
4 months agoon
By
Akkare Newsನವದೆಹಲಿ:ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರ ರಾಜ್ಯದಲ್ಲಿ ಮತ್ತೊಂದು ಸುತ್ತಿನ ರಾಜಕೀಯ ಸಂಘರ್ಷಕ್ಕೆ ನಾಂದಿ ಹಾಡಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗಳು ಎಂಟ್ರಿ [ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಪತ್ರ ಬರೆದಿದ್ದರು.
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಷ್ಟ್ರಪತಿಗಳ ರಾಜೇಶ್ ವರ್ಮ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ಗೆ ಪತ್ರ ಬರೆದಿದ್ದು, ರಮೇಶ್ ಬಾಬು ನೀಡಿದ ದೂರಿನ ಬಗ್ಗೆ ಸೂಕ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ.
ಇದೆಲ್ಲಾ ಆಡಿಷನ್ನ ಒಂದು ಭಾಗ; ಹೇಮಾ ಕಮಿಟಿ ವರದಿ ಬೆನ್ನಲ್ಲೇ ಖ್ಯಾತ ನಟಿಯ ಸ್ಫೋಟಕ ಹೇಳಿಕೆ
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ರಮೇಶ್ ಬಾಬು ವಿನಂತಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರಾಷ್ಟ್ರಪತಿಗಳ ಕಾರ್ಯದರ್ಶಿ ರಾಜೇಶ್ ವರ್ಮ ಶಾಲಿನಿ ರಜನೀಶ್ಗೆ ಪತ್ರ ಬರೆದಿದ್ದು, ದಯವಿಟ್ಟು ಮೇಲೆ ತಿಳಿಸಿದ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಸ್ವ-ವಿವರಣೆಯ ಮನವಿಯನ್ನು ಲಗತ್ತಿಸಿ. ಅರ್ಜಿಯ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.
ಅಲ್ಲದೆ, ಅರ್ಜಿದಾರರು ಈ ವಿಷಯದಲ್ಲಿ ಹೆಚ್ಚಿನ ಮಾಹಿತಿಗಾಗಿ ವಿಳಾಸದಾರರನ್ನು (ಯಾರಿಗೆ ಅರ್ಜಿಯನ್ನು ರವಾನಿಸಲಾಗಿದೆ) ನೇರವಾಗಿ ಸಂಪರ್ಕಿಸಲು ವಿನಂತಿಸಲಾಗಿದೆ ಎಂದೂ ಉಲ್ಲೇಖಿಸಲಾಗಿದೆ. ಅರ್ಜಿದಾರರು ತಮ್ಮ ಅರ್ಜಿ/ದೂರು ನೋಂದಾಯಿಸಲು ಪೋರ್ಟಲ್ ಅನ್ನು ಬಳಸಬಹುದು ಎಂದೂ ಸಲಹೆ ನೀಡಲಾಗಿದೆ.