Published
4 months agoon
By
Akkare Newsಮೈಸೂರು:ಅಮಾವಾಸ್ಯೆ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಚಾಮುಂಡಿ ಬೆಟ್ಟಕ್ಕೆ ಆಗಮಿಸಲಿದ್ದಾರೆ.
ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.
ಬಳಿಕ ದಾಸೋಹ ಭವನದಲ್ಲಿ ಕ್ಷೇತ್ರದ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸುವರು. ನಂತರ ಮೈಸೂರು ಮನೆಯಲ್ಲಿ ಸಂಜೆಯವರೆಗೆ ವಿಶ್ರಾಂತಿ ಪಡೆದು, ವಿಶೇಷ ವಿಮಾನದಲ್ಲಿ ವಾಪಸ್ ಆಗುವರು ಎಂದು ಅವರ ಅಧಿಕೃತ ಕಾರ್ಯಕ್ರಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ವಿಚಾರದಲ್ಲಿ ಕೋರ್ಟ್ನಲ್ಲಿ ನಡೆಯುತ್ತಿರುವ ವಾದ-ಪ್ರತಿವಾದಗಳು ಮುಕ್ತಾಯವಾಗಿದ್ದು, ನಾಳೆ ಸೋಮವಾರ ಮಧ್ಯಾಹ್ನ ತೀರ್ಪು ಬರುವ ಸಾಧ್ಯತೆ ಇದೆ.