Published
4 months agoon
By
Akkare Newsಪುತ್ತೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪುತ್ತೂರು ಕರ್ನಾಟಕ ರಿಕ್ಷಾ ಚಾಲಕ-ಮಾಲಕರ ಸಂಘ ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.
ಈಗಾಗಲೇ ಬ್ಯಾಟರಿ ರಿಕ್ಷಾಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸಲು, ಯಾವುದೇ ರಿಕ್ಷಾ ನಿಲ್ದಾಣದಲ್ಲಿ ನಿಲುಗಡೆಗೆ, ಬಾಡಿಗೆ ಮಾಡಲು ಅವಕಾಶ ನೀಡಲಾಗಿದೆ. ಪರಿಣಾಮ ತಾಲೂಕು ಪರವಾನಿಗೆ ಪಡೆದು ಬಾಡಿಗೆ ಮಾಡುತ್ತಿರುವ ರಿಕ್ಷಾ ಚಾಲಕರಿಗೆ ಸಮಸ್ಯೆ ಉಂಟಾಗಿದೆ. ತಕ್ಷಣ ಈ ಪ್ರಕ್ರಿಯೆನ್ನು ರದ್ದುಗೊಳಿಸಿ ಪರವಾಣಿಗೆ ಆಧಾರದಲ್ಲಿ ಬಾಡಿಗೆ ಮಾಡಲು ಅವಕಾಶ ನೀಡಬೇಕು, ಬ್ಯಾಟರಿ ಆಟೋ ರಿಕ್ಷಾಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸಲು ಅನುಮತಿ ನೀಡಿದಲ್ಲಿ ಎಲ್ಲಾ ರಿಕ್ಷಾಗಳಿಗೆ ಅನುಮತಿ ನೀಡಬೇಕು, ಪುತ್ತೂರು ನಗರ ಪ್ರದೇಶದಲ್ಲಿ ಬಹುಮಹಡಿ ವಾಣಿಜ್ಯ ಕಟ್ಟಡ ನಿರ್ಮಿಸುವ ಸಂದರ್ಭದಲ್ಲಿ ರಿಕ್ಷಾ ತಂಗುದಾಣಕ್ಕೆ ಸ್ಥಳಾವಕಾಶ ಒದಗಿಸಲು ಕ್ರಮಕೈಗೊಳ್ಳಬೇಕು, ಮುಂತಾದ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ನೀಡಲಾಯಿತು.