Published
4 months agoon
By
Akkare Newsಪುತ್ತೂರು /ಮಂಗಳೂರು/ಉಡುಪಿ: ಗಣೇಶ ಚತುರ್ಥಿಯ ಸಂಭ್ರಮದ ಆಚರಣೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸಿದ್ಧತೆ ನಡೆದಿದೆ. ಶುಕ್ರವಾರ ಗೌರಿ ಹಬ್ಬ ಮತ್ತು ಶನಿವಾರ ಗಣಪತಿ ಮೂರ್ತಿ ಪ್ರತಿಷ್ಠಾಪನೆಯೊಂದಿಗೆ ಗಣೇಶ ಹಬ್ಬ ನಡೆಯಲಿದೆ.
ಪುತ್ತೂರು /: ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯನ್ನು ಒಳಗೊಂಡಿ ರುವ ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ 165 ಕಡೆಗಳಲ್ಲಿ ಮತ್ತು ಜಿಲ್ಲಾ ವ್ಯಾಪ್ತಿಯ 221 ಸೇರಿ ಒಟ್ಟು 386 ಕಡೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ನಡೆಯಲಿದೆ.
ಪೆಂಡಾಲು ನಿರ್ಮಾಣ, ಸ್ವಾಗತ ಕಮಾನು, ದೀಪಾಲಂಕಾರ ಸಹಿತ ಉತ್ಸವ ಆಚರಣೆಗೆ ಸಂಬಂಧಿಸಿದ ಸಿದ್ಧತೆ ಅಂತಿಮ ಹಂತದಲ್ಲಿವೆ. ಗಣಪತಿ ಮೂರ್ತಿ ತಯಾರಕರೂ ಮೂರ್ತಿ ಗಳಿಗೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಉಡುಪಿಯಲ್ಲಿಉಡುಪಿ ಜಿಲ್ಲೆಯಲ್ಲೂ ಗೌರಿ, ಗಣೇಶ ಹಬ್ಬಕ್ಕಾಗಿ ಮನೆ ಮನೆಗಳಲ್ಲಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಸಂಘ ಸಂಸ್ಥೆಗಳು ಅಗತ್ಯ ಸಿದ್ಧತೆ ಮಾಡಿಕೊಂಡಿವೆ.