Published
4 months agoon
By
Akkare Newsಬಂಟ್ವಾಳ: ನವ ದಂಪತಿಗಳು ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಬೀಕರ ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ.
ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಬಿಸಿರೋಡಿನ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಗಳ ಆಲ್ಲೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸಹಪ್ರಯಾಣಿಕೆ ಮಹಿಳೆ ಸ್ಥಳದಲ್ಲಿ ಯೇ ಮೃತಪಟ್ಟಿದ್ದಾಳೆ. ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು. ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸು ಮಾವನ ಮನೆಗೆ ಹೋಗುವ ವೇಳೆ ಈಘಟನೆ ನಡೆದಿದೆ ಎನ್ನಲಾಗಿದೆ.
ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.