ಪುತ್ತೂರು: ಕೋಡಿಂಬಾಡಿಬಗ್ರಾಪಂ ಕಚೇರಿ ಸಭಾಂಗಣದಲ್ಲಿ ಅಕ್ರಮ ಸಕ್ರಮ ಬೈಠಕ್ ಹಾಗೂ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಸಮಿತಿ ಅಧ್ಯಕ್ಷರಾದ ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯಿತು.
ಬೈಠಕ್ ನಲ್ಲಿ ಕೋಡಿಂಬಾಡಿ,ಬೆಳ್ಳಿಪ್ಪಾಡಿ, ನೆಕ್ಕಿಲಾಡಿ, ಉಪ್ಪಿನಂಗಡಿ, ಹಿರೆಬಂಡಾಡಿ, ಬಜತ್ತೂರು,ಪಡ್ನೂರು,ಕಬಕ, ಕೊಡಿಪ್ಪಾಡಿ, ಮತ್ತು ಚಿಕ್ಕಮುಡ್ನೂರು ಗ್ರಾಮ ವ್ಯಾಪ್ತಿಯ ಅಕ್ರಮ ಸಕ್ರಮ ಹಾಗೂ 94 ಸಿ ಹಾಗೂ 94 ಸಿ ಸಿ ಅರ್ಜಿಗಳ ಹಕ್ಕು ಪತ್ರ ವಿತರಣೆ ನಡೆಯಿತು.
ಕಾರ್ಯಕ್ರಮದಲ್ಲಿ ತಹಶಿಲ್ದಾರ್ ಪುರಂದರ್ ಹೆಗ್ಡೆ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು, ರಾಮಣ್ಣ ಪಿಲಿಂಜ, ರೂಪರೇಖಾ ಆಳ್ವ ,ಕೋಡಿಂಬಾಡಿ ಗ್ರಾಪಂ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರ್ ಉಪಸ್ಥಿತರಿದ್ದರು