Published
3 months agoon
By
Akkare News
ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಈಗಾಗಲೇ ವಿಚಾರಣೆಗೆ ಸಂಬಂಧಿಸಿದ ವಾದ-ಪ್ರತಿವಾದ ಆಲಿಸಿದ್ದು, ಇಂದು ಅಂತಿಮ ಘಟ್ಟಕ್ಕೆ ಬರುವ ಸಾಧ್ಯತೆ ಇದೆ.
ನ್ಯಾಯಮೂರ್ತಿಗಳು ಈಗಾಗಲೇ ಸೆ.12ಕ್ಕೆ ವಾದ-ಪ್ರತಿವಾದ ಮುಗಿಯಬೇಕು ಎಂದು ಮೌಖಿಕ ಸೂಚನೆ ನೀಡಿದ್ದಾರೆ. ಈ ಆದೇಶದ ಬೆನ್ನಲ್ಲೇ ಮುಖ್ಯಮಂತ್ರಿ ಅವರ ಪರ ಸುಪ್ರೀಂ ಕೋರ್ಟ್ನ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘಿ ಹಾಗೂ ಮಾಜಿ ಅಡ್ವಕೇಟ್ ಜನರಲ್ ರವಿವರ್ಮ ಕುಮಾರ್ ವಾದ ಮುಂದುವರೆಸಲಿದ್ದಾರೆ.