Published
1 year agoon
By
Akkare News
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಕೆ.ಎಸ್.ಎಸ್ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ ಪಡೆದಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಶ್ವಿ ಡಿ. ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರುಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ದಾಮೋದರ ಶೆಟ್ಟಿ ಮತ್ತು ಶ್ರೀಮತಿ ಭವ್ಯ ಡಿ. ಶೆಟ್ಟಿರವರ ಸುಪುತ್ರಿ.


ವಿದ್ಯಾರ್ಥಿನಿಯರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.








