ನಮ್ಮೊಂದಿಗೆ ಸಂಪರ್ಕ ಸಾಧಿಸಿ

ರಾಜಕೀಯ

ಮುಡಾ ತೀರ್ಪು ಬಿಜೆಪಿ ಮತ್ತು ರಾಜ್ಯಪಾಲರ ಷಡ್ಯಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ : ಕಾಂಗ್ರೆಸ್

Published

on

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಆ ಮೂಲಕ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದೆ.

 

ಈ ಬೆನ್ನಲ್ಲೇ ಕಾಂಗ್ರೆಸ್‌, ರಾಜ್ಯಪಾಲರು ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಕಾಂಗ್ರೆಸ್‌, “ಹೋರಾಟ ಮುಂದುವರೆಯಲಿದೆ, ಸರಕಾರವನ್ನು ಅಸ್ಥಿರಗೊಳಿಸುವ ರಾಜ್ಯಪಾಲರ ಪ್ರಯತ್ನಕ್ಕೆ, ಬಿಜೆಪಿಯ ಷಡ್ಯಂತ್ರಕ್ಕೆ ಬಗ್ಗುವ ಪ್ರಶ್ನೆಯೇ ಇಲ್ಲ” ಎಂದು ತಿಳಿಸಿದೆ.

 

“ರಾಜ್ಯಪಾಲರು ಕುಮಾರಸ್ವಾಮಿ ಹಾಗೂ ಇತರ ಬಿಜೆಪಿ ನಾಯಕರ ಬಗೆಗಿನ ದೂರುಗಳನ್ನು ಮುಚ್ಚಿಡಲು ಪ್ರಯತ್ನಿಸಿದ್ದು ಜಗಜ್ಜಾಹೀರಾಗಿದೆ. ಈ ಬಗ್ಗೆ ದೂರುಗಳು ಹೇಗೆ ಸೋರಿಕೆಯಾದವು ಎಂದು ರಾಜ್ಯಪಾಲರ ಪ್ರಶ್ನೆಯೇ ಅವರ ತಾರತಮ್ಯದ ರಾಜಕೀಯಕ್ಕೆ ಪುರಾವೆ ಒದಗಿಸುತ್ತವೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

 

 

ದ.ಕ. ಜಿಲ್ಲೆಯಿಂದ ಒಟ್ಟು 9 ಗ್ರಾಮ ಪಂಚಾಯತ್‌ಗಳು ಗಾಂಧಿ ಗ್ರಾಮ ಪುರಸ್ಕಾರದ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದು ಮಂಗಳೂರು ತಾಲೂಕಿನ ನೀರುಮಾರ್ಗ ಗ್ರಾ.ಪಂ, ಮೂಡಬಿದ್ರೆ ತಾಲೂಕಿನ ಪಡುಮಾರ್ನಾಡು ಗ್ರಾ.ಪಂ., ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾ.ಪಂ., ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾ.ಪಂ., ಕಡಬ ತಾಲೂಕಿನ ಆಲಂಕಾರು ಗ್ರಾ.ಪಂ., ಬೆಳ್ತಂಗಡಿ ತಾಲೂಕಿನ ಕಾಶಿಪಟ್ಟ ಗ್ರಾ.ಪಂ., ಸುಳ್ಯ ತಾಲೂಕಿನ ಕಳಂಜ ಗ್ರಾ.ಪಂ., ಮುಲ್ಕಿ ತಾಲೂಕಿನ ಕೆಮ್ರಾಲ್ ಗ್ರಾ.ಪಂ. ಹಾಗೂ ಉಳ್ಳಾಲ ತಾಲೂಕಿನ ಬಾಳೆಪುಣಿ ಗ್ರಾಮ ಪಂಚಾಯತ್ ಈ ಪುರಸ್ಕಾರದ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement