Published
3 months agoon
By
Akkare Newsಕನಕಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹಮ್ಮಿಕೊಂಡಿದ್ದ ನೂತನ ಕಟ್ಟಡಗಳ ಉದ್ಘಾಟನೆ ಹಾಗೂ 2024-25ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ರೆಡ್ ಕ್ರಾಸ್ ಹಾಗೂ ರೇಂಜರ್ಸ್, ರೋವರ್ಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಶೈಕ್ಷಣಿಕ ಕ್ಷೇತ್ರದಲ್ಲಿ ಕನಕಪುರ ತಾಲೂಕು ಪ್ರಗತಿ ಹೊಂದುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯ ಕೂಡಾ ಮುಖ್ಯವಾಗಿದೆ. ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ವರ್ಧಿಸುವತ್ತ ಗಮನ ಹರಿಸಬೇಕು.
ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಕನಸಿನ ಜೊತೆಗೆ ಪರಿಶ್ರಮವಿದ್ದರೆ ಯಶಸ್ಸು ಖಂಡಿತ. ಕಲಿಕೆಗೆ ಕೊನೆಯಿಲ್ಲ. ನಮ್ಮ ಜೀವನದಲ್ಲಿ ಕಲಿಕೆ ಎಂಬುದು ನಿರಂತರ. ಆತ್ಮ ವಿಶ್ವಾಸದಿಂದ ಬಂದ ಸವಾಲುಗಳನ್ನು ಎದುರಿಸಬೇಕು. ನಿರ್ದಿಷ್ಟವಾದ ಗುರಿಯನ್ನು ಇಟ್ಟುಕೊಂಡು ಆತ್ಮವಿಶ್ವಾಸದೊಂದಿಗೆ ಸಾಧಿಸುವ ಛಲವಿದ್ದರೆ ನಿಮ್ಮ ಗುರಿ ಸಾಧನೆ ಸುಲಭವಾಗುತ್ತದೆ ಎಂದು ತಿಳಿಸಿದರು