Published
3 months agoon
By
Akkare Newsಪುತ್ತೂರು: ದ.ಕ ಜಿಲ್ಲಾ ವಿಧಾನ ಪರಿಷತ್ತಿನ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯಾಗಿ ಕಿಶೋರ್ ಬೊಟ್ಯಾಡಿ ಅವರನ್ನು ಕಣಕ್ಕಿಳಿಸಲಾಗಿದೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಪರಿಷತ್ ಸದಸ್ಯರನ್ನು ಆಯ್ಕೆ ಮಾಡಲು ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ. ಈ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ಉಪಚುನಾವಣೆ ನಡೆಯಲಿದೆ.
ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಕಿಶೋರ್ ಕುಮಾರ್ ಪುತ್ತೂರು ಅವರ ಹೆಸರನ್ನು ಅಂತಿಮಗೊಳಿಸಿದೆ. ಇವರು ಸರ್ವೆ ಗ್ರಾಮದ ಬೊಟ್ಯಾಡಿ ನಿವಾಸಿ.