Published
3 months agoon
By
Akkare Newsನಾಳೆ ನಾಮಪತ್ರ ಸಲ್ಲಿಕೆ : SDPI ರಾಜ್ಯಾಧ್ಯಕ್ಷರಿಂದ ಘೋಷಣೆ
ಬೆಂಗಳೂರು : ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯಲ್ಲಿ ಎಸ್‌ಡಿಪಿಐ ಅಭ್ಯರ್ಥಿಯಾಗಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಮಾಹಿತಿ ನೀಡಿದ್ದಾರೆ.
ಈ ಸಂಬಂಧ ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಉಪ ಚುನಾವಣೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಜನಪರ ಹೋರಾಟಗಾರ, ದಕ್ಷ ರಾಜಕಾರಣಿ , ಜನ ಸಾಮಾನ್ಯರ ಜನದ್ವನಿಯಾಗಿರುವ SDPI ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ರವರ ಹೆಸರನ್ನು ರಾಜ್ಯ ಸಮಿತಿ ಅಂತಿಮಗೊಳಿಸಿದ್ದು, ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ನಾಳೆ (3/10/24) ಎಸ್ಡಿಪಿಐ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದಾರೆ.
ರಾಜ್ಯದಲ್ಲಿ ಕೋಮುವಾದ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿರುವ ಪಕ್ಷಗಳು ಮತ್ತು ಅದರ ಅಭ್ಯರ್ಥಿಗಳ ವಿರುದ್ಧವಾಗಿ ಸ್ಥಳೀಯ ಸಂಸ್ಥೆಗಳ ಬಗ್ಗೆ ಅರಿವು ಹೊಂದಿರುವ SDPI ಪಕ್ಷದ ಅಭ್ಯರ್ಥಿ ಅನ್ವರ್ ಸಾದಾತ್ ಅತ್ಯoತ ಸಮರ್ಥ ಅಭ್ಯರ್ಥಿ ಯಾಗಿದ್ದು, ಅವರಿಗೆ ಮತ ನೀಡಿ ಚುನಾಯಿಸಬೇಕೆಂದು ಎಂದು ಪೋಸ್ಟ್ ಮಾಡಿದ್ದಾರೆ.