Published
3 months agoon
By
Akkare Newsಬೆಂಗಳೂರು, : ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧಿಸಿದಂತೆ ಡಿವೈಎಸ್‌ಪಿ ಶ್ರೀಧರ್ ಪೂಜಾರಿ ಅನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.ಬಿಟ್ ಕಾಯಿನ್ ಪ್ರಕರಣದ ತನಿಖೆ ವೇಳೆ ಎವಿಡೆನ್ಸ್ ಟ್ಯಾಂಪರಿಂಗ್ ಮಾಡಿದ್ದ ಆರೋಪ ಅವರ ಮೇಲಿತ್ತು. ಹೀಗಾಗಿ ಇಂದು ವಿಚಾರಣೆಗೆ ಕರೆಸಿ ಸಿಐಡಿ ಕಚೇರಿಯಲ್ಲೇ ಎಸ್ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಎಸ್ಐಟಿ ರಚನೆ ಬಳಿಕ ಕಾಟನ್ಪೇಟೆ ಠಾಣೆಯಲ್ಲಿ ಶ್ರೀಧರ್ ವಿರುದ್ಧ ಹೊಸ ಎಫ್ಐಆರ್ ದಾಖಲಾಗಿತ್ತು. ಕಾಟನ್ಪೇಟೆ ಠಾಣೆಯ ಕೇಸ್ನ್ನೂ ಸಹ ಎಸ್ಐಟಿ ತನಿಖೆ ನಡೆಸುತ್ತಿದ್ದು, ಸದ್ಯ ಡಿವೈಎಸ್‌ಪಿ ಶ್ರೀಧರ್ ಪೂಜಾರಿಯನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದು, ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಡಿವೈಎಸ್‌ಪಿ ಶ್ರೀಧರ್ ಈ ಹಿಂದೆ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಬಂಧಿಸಿ ವಿಚಾರಣೆ ನಡೆಸಿದ್ದರು. ಡಿವೈಎಸ್‌ಪಿ ಶ್ರೀಧರ್ ಕೆ. ಪೂಜಾರಿ ವಿರುದ್ಧ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯದಿಂದ ಘೋಷಿತ ಆರೋಪಿ ಎಂದು ವಾರಂಟ್ ಜಾರಿ ಮಾಡಲಾಗಿತ್ತು.
ವಾರಂಟ್ ಪ್ರಶ್ನಿಸಿ ಇತ್ತೀಚೆಗೆ ಶ್ರೀಧರ್ ಕೆ. ಪೂಜಾರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಬಳಿಕ ಘೋಷಿತ ಆರೋಪಿ ಆದೇಶವನ್ನು ರದ್ದುಪಡಿಸಿತ್ತು. ಬಿಟ್ ಕಾಯಿನ್ ಕೇಸ್ನಲ್ಲಿ ಆರೋಪಿಗಳಿಗೆ ಸಹಾಯ ಮಾಡಿರುವ ಆರೋಪವನ್ನು ಶ್ರೀಧರ್ ಕೆ. ಪೂಜಾರಿ ಎದುರಿಸಿದ್ದರು.