ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ಕುಕ್ಕೆ ಸುಬ್ರಹ್ಮಣ್ಯ: ಭೋಜನ ಪ್ರಸಾದದಲ್ಲಿ ಹತ್ತು ಬಗೆಯ ಪಾಯಸ| ಪ್ರತಿದಿನ ಬೇರೆ ಬೇರೆ ವೆರೈಟಿ ಪಾಯಸ ಬಡಿಸಲು ನಿರ್ಧಾರ

Published

on

ಕಾಣಿಯೋರು :::ಕುಕ್ಕೆ ಸುಬ್ರಹ್ಮಣ್ಯ: ದೇವಸ್ಥಾನದಲ್ಲಿ ಭಕ್ತರಿಗೆ ನೀಡುವ ಭೋಜನ ಪ್ರಸಾದದಲ್ಲಿ ಕೆಲವು ಬದಲಾವಣೆಗಳನ್ನು ತರಲಾಗಿದೆ. ಇದರಿಂದ ಭಕ್ತರಿಗೆ ಪ್ರತಿದಿನವೂ ವಿಶೇಷ ಭೋಜನ ಪ್ರಸಾದ ಸವಿಯುವ ಅವಕಾಶ ಲಭಿಸಿದೆ.

 

ಇದುವರೆಗೆ ವಿಶೇಷ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲ ದಿನ ಒಂದೇ ಬಗೆಯ ಪಾಯಸವನ್ನು ಭಕ್ತರಿಗೆ ನೀಡಲಾಗುತ್ತಿತ್ತು. ಈಗ ಹೊಸ ವ್ಯವಸ್ಥೆಯಡಿ ಪ್ರತಿದಿನವೂ ಭಿನ್ನವಾದ ಪಾಯಸದ ಸ್ವಾದವನ್ನು ಭಕ್ತರಿಗೆ ಉಣಬಡಿಸುವ ವ್ಯವಸ್ಥೆಯನ್ನು ಅಧಿಕಾರಿಗಳು ಮಾಡಿದ್ದಾರೆ. ಕಡಲೆಬೇಳೆ, ಹೆಸರು ಬೇಳೆ, ಸಬ್ಬಕ್ಕಿ, ಗೋಧಿ ಕಡಿ, ಹಾಲು, ಅಕ್ಕಿ, ಶ್ಯಾವಿಗೆ, ರವೆ ಮತ್ತು ಸಿರಿಧಾನ್ಯ ಸೇರಿ 10 ಬಗೆಯ ಪಾಯಸವನ್ನು ತಯಾರಿಸಿ, ದಿನವೂ ಭಿನ್ನ ರುಚಿ ಉಣಬಡಿಸಲಾಗುತ್ತಿದೆ. ಸುಬ್ರಹ್ಮಣ್ಯದ ಪ್ರಸಾದ ಭೋಜನವು ಸ್ವಾದಿಷ್ಟ ಮತ್ತು ಅಷ್ಟೇ ಪೌಷ್ಟಿಕವಾಗಿರಬೇಕು ಎಂಬ ಉದ್ದೇಶದಿಂದ ಗುಣಮಟ್ಟದ 15 ಬಗೆಯ ತರಕಾರಿಗಳನ್ನು ಪ್ರತಿದಿನ ಸಾಂಬಾರಿಗೆ ಬಳಸುವಂತೆಯೂ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

 

‘ಅನ್ನದಾತ ಸುಬ್ಬಪ್ಪ’ ಪ್ರತೀತಿಯ ಈ ದೇವಳದಲ್ಲಿ ಪ್ರಸಾದ ವ್ಯವಸ್ಥೆಯಲ್ಲಿ ಈ ಬದಲಾವಣೆಗಳನ್ನು ತಂದವರು ದೇವಳದ ಆಡಳಿತಾಧಿಕಾರಿಯೂ ಆಗಿರುವ ಪುತ್ತೂರು ಉಪ ವಿಭಾಗಾಧಿಕಾರಿ ಜುಬಿನ್ ಮೊಹಪಾತ್ರ ಮತ್ತು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ. ಇವರಿಬ್ಬರ ವಿಶೇಷ ಆಸಕ್ತಿ ಫಲವಾಗಿ ಭೋಜನ ಪ್ರಸಾದವು ಮತ್ತಷ್ಟು ವಿಶೇಷವೆನಿಸಲಿದೆ.

 

 

 

 

 

 

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ವಾರ್ಷಿಕ ಸರಾಸರಿ 55ಲಕ್ಷಕ್ಕೂ ಹೆಚ್ಚು ಭಕ್ತರು ಭೋಜನ ಪ್ರಸಾದ ಸ್ವೀಕರಿಸುತ್ತಾರೆ. ಸಂಪ್ರದಾಯದಂತೆ ಇಲ್ಲಿ ಬಾಳೆ ಎಲೆಯಲ್ಲಿ ಪ್ರಸಾದ ನೀಡಲಾಗುತ್ತದೆ. ಚಟ್ನಿ, ಪಲ್ಯ, ಅನ್ನ, ಸಾರು, ಸಾಂಬಾರು, ಪಾಯಸ, ಮಜ್ಜಿಗೆ ನೀಡಲಾಗುತ್ತದೆ. ಜಾತ್ರೆ ಸೇರಿದಂತೆ ವಿಶೇಷ ದಿನಗಳಲ್ಲಿ ಅಪಾರ ಸಂಖ್ಯೆಯ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಸಾದ ಸ್ವೀಕರಿಸುತ್ತಾರೆ. ಏಕಾದಶಿ ದಿನ ಅವಲಕ್ಕಿ, ಉಪ್ಪಿಟ್ಟು ಮತ್ತು ಮಜ್ಜಿಗೆ ವಿತರಿಸಲಾಗುತ್ತದೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement