Published
2 months agoon
By
Akkare Newsಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್ ತೆರಳಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಇದೆ. ಆ ಕಾರಣಕ್ಕಾಗಿ ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ.
ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಜಾಸ್ತಿ ಆಗಿರುವುದರಿಂದ ವೈದ್ಯರು ಜೈಲಿಗೆ ಬಂದು ಆರೋಗ್ಯ ತಪಾಸಣೆ ಮಾಡಿದ್ದಾರೆ. ಬಳಿಕ ಅವರಿಗೆ ಎಂಆರ್ಐ ಸ್ಕ್ಯಾನಿಂಗ್ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ.
ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ದರ್ಶನ್ ಅವರ ತಪಾಸಣೆ ಮಾಡಿದ್ದಾರೆ. ಬಳಿಕ ದರ್ಶನ್ ಅವರನ್ನು ವಾಪಸ್ ಬಳ್ಳಾರಿ ಜೈಲಿಗೆ ಕರೆದುಕೊಂಡು ಬರಲಾಗಿದೆ ಎಂದು ತಿಳಿದುಬಂದಿದೆ.