ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸ್ಪರ್ಧೆ

Published

on

ಬೆಂಗಳೂರು : ಬಾಕಿ ಉಳಿದಿದ್ದ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಯಾಸಿರ್​ ಅಹ್ಮದ್ ಖಾನ್​​ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಅವರು ಇಂದು (ಅಕ್ಟೋಬರ್ 24) ಅಧಿಕೃತ ಆದೇಶ ಹೊರಡಿಸಿದ್ದಾರೆ.

 

ಹಾನಗಲ್​ ತಾಲೂಕಿನ ಬೊಮ್ಮನಳ್ಳಿ ಗ್ರಾಮದವರಾದ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ , ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಬಸವರಾಜ್ ಬೊಮ್ಮಾಯಿ ವಿರುದ್ಧ ಸೋಲುಕಂಡಿದ್ದರು. ಇದೀಗ ಉಪಚುನಾವಣೆಗೂ ಸಹ ಕಾಂಗ್ರೆಸ್​, ಹೈಕಮಾಂಡ್ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರನ್ನೇ ಕಣಕ್ಕಿಳಿಸಿದೆ.

 

 

 

 

ಹಾವೇರಿ ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ಬೊಮ್ಮಾಯಿ ಅವರು ಸಂಸದರಾಗಿ ಆಯ್ಕೆಯಾಗಿದ್ದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈಗ ಉಪಚುನಾವಣೆಗೆ ಬಿಜೆಪಿಯಿಂದ ಬೊಮ್ಮಾಯಿ ಅವರ ಪುತ್ರ ಭರತ್​ ಕಣಕ್ಕಿಳಿದಿದ್ದಾರೆ. ಹೀಗಾಗಿ ಕಾಂಗ್ರೆಸ್​ನ ಯಾಸೀರ್​ ಅಹ್ಮದ್​ ಖಾನ್​ ಪಠಾಣ್ ಅವರು ಕಳೆದ ಚುನಾವಣೆಯಲ್ಲಿ ತಂದೆಯನ್ನು ಎದುರಿಸಿದ್ದರೆ ಈ ಉಪಚುನಾವಣೆಯಲ್ಲಿ ಪುತ್ರನ ವಿರುದ್ಧ ಕಣಕ್ಕಿಳಿಯಲಿದ್ದಾರೆ.

 

 

 

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement