Published
2 months agoon
By
Akkare Newsಪುತ್ತೂರು: 2 ವರ್ಷದ ಹಿಂದೆ ಪುತ್ತೂರಿನ ಬೀಡಿ ಬ್ರ್ಯಾಂಚ್‌ವೊಂದರಿಂದ ಸಾವಿರಾರು ರೂಪಾಯಿ ಮೌಲ್ಯದ ಬೀಡಿ ಕದ್ದ ( beedi thief ) ಪ್ರಕರಣದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕಿನ ಕುದ್ಮಾರು ಗ್ರಾಮದ ಏರ್ಕಮೆ ನಿವಾಸಿ ಮಹಮ್ಮದ್ ಕುಂಞಿ ಬಂಧಿತ ಆರೋಪಿಯಾಗಿದ್ದಾನೆ. 2022ರಲ್ಲಿ ಕೂರ್ನಡ್ಕದ ಬೀಡಿ ಬ್ರ್ಯಾಂಚ್‌ವೊಂದರಿಂದ ಸುಮಾರು 22ಸಾವಿರ ರೂ.ಮೌಲ್ಯದ ಬೀಡಿಗಳನ್ನು ಕಳವು ಮಾಡಿದ ಪ್ರಕರಣದಲ್ಲಿ ಬಂಧಿತರಾಗಿದ್ದರು.
ನ್ಯಾಯಾಲಯದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು. ತನಿಖೆ ಕೈಗೆತ್ತಿಕೊಂಡ ಪುತ್ತೂರು ನಗರ ಠಾಣಾ ಪೊಲೀಸರು ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ಅವರ ಮಾರ್ಗದರ್ಶನದಂತೆ ಸಿಬ್ಬಂದಿಗಳಾದ ವಸಂತ ಗೌಡ ಮತ್ತು ಬಸವರಾಜು ಅವರು ಆರೋಪಿಯನ್ನು ಉಳ್ಳಾಲದ ಕೆ ಸಿ ರೋಡ್ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.