Published
2 months agoon
By
Akkare Newsಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಸಿಎಂ ಸಿದ್ದರಾಮಯ್ಯ ಹಲವು ಷರತ್ತುಗಳನ್ನು ಹಾಕಿದ್ದಾರೆ. ದೀಪಾವಳಿ ದಿನ ಹಸಿರು ಪಟಾಕಿ ಸಿಡಿಸಲು ಮಾತ್ರ ಅವಕಾಶವಿದ್ದು ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಒಗಳ ಜತೆ ಗೃಹಕಚೇರಿ ಕೃಷ್ಣಾದಲ್ಲಿ ಅ.26ರಂದು ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರತಿವರ್ಷ ಪಟಾಕಿ ಸಿಡಿಸುವ ವೇಳೆ ಅವಘಡಗಳು ಸಂಭವಿಸುತ್ತದೆ. ಈ ಬಾರಿ ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಲೋಪ ಆಗಬಾರದು.
ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ, ನಿಯಮ ಮೀರಿದರೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಅವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.