Published
2 months agoon
By
Akkare Newsಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ ಆರು ವಾರಗಳ ಅವಧಿ ಅಂದರೆ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆ ಮೂಲಕ ರೇಣುಕಾ ಸ್ವಾಮಿ ಕೊಲೆ ಆರೋಪದ ಮೇಲೆ ಕಳೆದ ಸುಮಾರು ಐದು ತಿಂಗಳಿಂದಲೂ ಜೈಲಿನಲ್ಲಿ ದಿನ ದೂಡುತ್ತಿದ್ದ ನಟ ದರ್ಶನ್ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಷರತ್ತುಗಳು ಅನ್ವಯ
ಇನ್ನು ನಟ ದರ್ಶನ್ ಗೆ ನೀಡಲಾಗಿರುವ ಮಧ್ಯಂತರ ಜಾಮೀನಿಗೆ ಹೈಕೋರ್ಟ್ ಸಾಕಷ್ಟು ಷರತ್ತುಗಳನ್ನು ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು, ‘ವೈದ್ಯಕೀಯ ಚಿಕಿತ್ಸೆ ವಿಚಾರಣಾಧೀನ ಕೈದಿಯ ಹಕ್ಕು’ ಎಂದು ಉಲ್ಲೇಖಿಸಿ ಇದೀಗ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದಾರೆ. ಆದರೆ ಆರು ವಾರಗಳ ಮಧ್ಯಂತರ ಜಾಮೀನು ಇದಾಗಿದ್ದು, ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ನೀಡಲಾಗಿದೆ.
ಜಾಮೀನು ಪಡೆದ ಬಳಿಕ ಒಂದು ವಾರದಲ್ಲಿ ನಟ ದರ್ಶನ್ ಆಸ್ಪತ್ರೆ ದಾಖಲಾತಿ ಮತ್ತು ಚಿಕಿತ್ಸೆ ವಿವರವನ್ನು ಕೋರ್ಟ್ ಗೆ ನೀಡಬೇಕು ಎಂದು ಹೇಳಿದೆ.
ಅಲ್ಲದೆ ದರ್ಶನ್ ಪಾಸ್ಪೋರ್ಟ್ ಅನ್ನು ಕೋರ್ಟ್ ಸುಪರ್ಧಿಗೆ ನೀಡಬೇಕು ಎಂದು ಹೇಳಿದೆ.