Published
1 year agoon
By
Akkare Newsಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
“ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ” ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.