ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ದಕ್ಷಿಣ ಕನ್ನಡದಲ್ಲಿ ಚಡ್ಡಿ ಗ್ಯಾಂಗ್ ಎಂಟ್ರಿ ಪಡೆದಿಲ್ಲ, ಸಾಮಾಜಿಕ ಜಾಲ ತಾಣಗಳಲ್ಲಿ ಕಟ್ಟು ಕಥೆ ಹರಡುವವರ ವಿರುದ್ದ ಕಠಿಣ ಕ್ರಮ : ಜಿಲ್ಲಾ ಎಸ್ಪಿ ಎಚ್ಚರಿಕೆ

Published

on

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂದಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲಾವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಇದರ ಬಗ್ಗೆ ತನಿಖೆ ನಡೆಸಲಾಗಿ ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದೆ. ಇದೊಂದು ಸಂಪೂರ್ಣ ಕಟ್ಟು ಕಥೆ ಆಗಿದೆ.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಅಂತಹ ನೈಜ ಘಟನೆಗಳು ಸಂಭವಿಸಿದಲ್ಲಿ ತಕ್ಷಣ 112 ಗೆ ಕರೆ ಮಾಡಿ ದೂರು ನೀಡುವಂತೆ ಸಾರ್ವಜನಿಕರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್ ಅವರು ವಿನಂತಿಸಿದ್ದಾರೆ.


ಈ ರೀತಿಯ ಹಳೆಯ ವಿಡಿಯೋ ಅಥವಾ ಫೋಟೋಗಳನ್ನು ಅವುಗಳ ಪೂರ್ವಾಪರ ಪರಿಶೀಲಿಸದೇ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೂಡಾ ಎಸ್ಪಿ ಅವರು ಇದೇ ವೇಳೆ ಎಚ್ಚರಿಸಿದ್ದಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement