Published
5 days agoon
By
Akkare Newsವಿಟ್ಲ : ಉತ್ತಮ ಆರೋಗ್ಯ, ವಿದ್ಯಾಭ್ಯಾಸ,ಉದ್ಯೋಗ ಇದ್ದರೆ ಮಾತ್ರ ಪರಿಪೂರ್ಣ ಮನುಷ್ಯನಾಗಲು ಸಾಧ್ಯ ಎಂದು ಪುತ್ತೂರು ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಮನ್ವಯಾಧಿಕಾರಿ ಯವರ ಕಛೇರಿ ಬಂಟ್ವಾಳ ಹಾಗೂ ಶ್ರೀ ಸತ್ಯ ಸಾಯಿ ಲೋಕ ಸೇವಾ ಪ್ರೌಢಶಾಲೆ ಅಳಿಕೆ ಬಂಟ್ವಾಳ ತಾಲೂಕು ಇದರ ಸಹಭಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ ಅಳಿಕೆ ಶ್ರೀ ಸತ್ಯ ಸಾಯಿ ಲೋಕ ಸೇವಾ ಪ್ರೌಢ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ 2024 – 25 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಭೆ ಎಲ್ಲಿ ಅಡಗಿದೆ ಎಂದು ಯಾರಿಗೂ ಗೊತ್ತಿಲ್ಲ ಅದನ್ನು ಹುಡುಕಿ ತೆಗೆಯುವ ಅಗತ್ಯತೆ ಇದೆ, ಅದಕ್ಕೆ ಇಂತಹ ಪ್ರತಿಭಾ ಕಾರಂಜಿಗಳು ಉತ್ತಮ ವೇದಿಕೆ ಆಗಿದೆ. ಶಿಸ್ತು, ಶ್ರಮ, ಗುರಿ ಇದ್ದರೆ ಯಾವುದನ್ನು ಸಾಧಿಸಬಹುದು, ಅದಕ್ಕಾಗಿ ಮನೆ ಮನೆಗಳಲ್ಲಿ ಒಳ್ಳೆಯ ವಾತಾವಣದ ಸೃಷ್ಟಿಸುವ ಅಗತ್ಯತೆ ಇದೆ, ಹಾಗೂ ಉತ್ತಮ ವಿದ್ಯಾವಂತರು ರಾಜಕೀಯಕ್ಕೆ ಬರುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮದ ಅಚ್ಚುಕಟ್ಟಿನ ವ್ಯವಸ್ಥೆಗೆ ಸಹಕರಿಸಿದ ಶ್ರೀ ಸತ್ಯ ಸಾಯಿ ಲೋಕ ಸೇವಾ ಸಂಸ್ಥೆಯ ಸಂಚಾಲಕರನ್ನು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಇಲಾಖೆ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಯಶಸ್ವಿಗೆ ಸಹಕರಿಸಿದ ತಾಲೂಕಿನ ಸಿ ಆರ್ ಪಿ ಯವರನ್ನು ಪ್ರಸಂಶಾ ಪತ್ರ ನೀಡಿ ಗೌರವಿಸಲಾಯಿತು.
ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ತಾಲೂಕಿನ ವಿವಿಧ ಶಾಲೆಗಳ ಸುಮಾರು 1250 ಮಕ್ಕಳು ಪಾಲ್ಗೊಂಡಿದ್ದರು
ಸ್ಪರ್ಧೆ ಯಲ್ಲಿ ವಿಜೇತರಾದ ಬಾಲಕರಿಗೆ ಪೇಟ ತೊಡಿಸಿ ಪ್ರಶಸ್ತಿ ಪತ್ರ,ಸ್ಮರಣಿಕೆ, ಹಣ್ಣು ಹಾಗೂ ಬಾಲಕಿಯರಿಗೆ ಕಿರೀಟ ತೊಡಿಸಿ,ಪ್ರಶಸ್ತಿ ಪತ್ರ, ಸ್ಮರಣಿಕೆ, ಹಣ್ಣು ನೀಡಿ ಅಭಿನಂದಿಸಾಲಾಯಿತು.
ಅಳಿಕೆ ಶೀ ಸತ್ಯಸಾಯಿ ಲೋಕ ಸೇವಾ ಸಂಸ್ಥೆಯ ಅಚ್ಚುಕಟ್ಟಿನ ವ್ಯವಸ್ಥೆ ಎಲ್ಲರ ಗಮನ ಸೆಳೆಯಿತು.
ವೇದಿಕೆಯಲ್ಲಿ ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ,ಸದಸ್ಯರಾದ ಸದಾಶಿವ ಮಡಿಯಾಲ, ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ಸಂಚಾಲಕರಾದ ಚಂದ್ರಶೇಖರ್ ಭಟ್,ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪ್ರಸಾದ್, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಮುಖ್ಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಕಿರಣ್ ಕುಮಾರ್,ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಉಪಾಧ್ಯಕ್ಷೆ ಶ್ರೀಮತಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷೆ ಪ್ರೇಮಾ, ಅನುದಾನಿತ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲ್ಯಾನ್ಸಿ ರೋಡ್ರಿಗಸ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಜಯರಾಮ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ರೈ, ಶಿಕ್ಷಣಧಿಕಾರಿಗಳ ಸಂಘದ ಶುಶೀಲಾ,ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಸಂತೋಷ್ ಕುಮಾರ್, ಚಿತ್ರಕಲಾ ಸಂಘದ ಜಿಲ್ಲಾ ಅಧ್ಯಕ್ಷ ಬಾಲಕೃಷ್ಣ, ಚಿತ್ರಕಲಾ ಸಂಘದ ತಾಲೂಕು ಅಧ್ಯಕ್ಷ ಚೆನ್ನಕೇಶವ,ಜಿ ಪಿ ಟಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಗುರುರಾಜ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಇಂದುಶೇಖರ್, ಶ್ರೀ ಸತ್ಯ ಸಾಯಿ ಲೋಕ ಸೇವಾ ಪ್ರೌಢಶಾಲೆ ಅಳಿಕೆಯ ಮುಖ್ಯ ಶಿಕ್ಷಕ ರಘು ಟಿ ವೈ, ಶ್ರೀ ಸತ್ಯ ಸಾಯಿ ಲೋಕ ಸೇವಾ ಅಳಿಕೆಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಈಶ್ವರ ನಾಯ್ಕ್, ಮೊದಲಾದವರು ಉಪಸ್ಥಿತರಿದ್ದರು.
ಅಳಿಕೆ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ ನಾಡಗೀತೆ ಹಾಡಿದರು. ಬಂಟ್ವಾಳ ಪ್ರಭಾರ ಕ್ಷೇತ್ರ ಸಮನ್ವಯಾಧಿಕಾರಿ ವಿದ್ಯಾ ಕುಮಾರಿ ಸ್ವಾಗತಿಸಿ,ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್ ಜಿ ಕಾರ್ಯಕ್ರಮದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನಾಡಿದರು , ಪ್ರತಿಭಾ ಕಾರಂಜಿಯ ನೋಡೆಲ್ ಅಧಿಕಾರಿ ಪ್ರತಿಮಾ ವೈ ವಿ ವಂದಿಸಿದರು.ಸುರೇಖಾ ಹಾಗೂ ಯತೀಶ್ ಪಿ ಕಾರ್ಯಕ್ರಮ ನಿರೂಪಿಸಿದರು.