Published
1 month agoon
By
Akkare News
ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗ್ಗಿನ ಜಾವ ಸಂಭವಿಸಿದೆ.
ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿ ಹೊಡೆದಿದ್ದು, ಚಾಲಕ ಸೇರಿದಂತೆ ಮಂಗಳೂರು ಮೂಲದ ನಾಲ್ವರು ವ್ಯಕ್ತಿಗಳಿಗೆ ಗಂಭೀರವಾಗಿ ಗಾಯಗೊಂಡರೆನ್ನಲಾಗಿದೆ.
ಸಂಪಾಜೆಯ ತಾಜುದ್ದೀನ್ ಟರ್ಲಿ ಅವರ ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿರುವುದಾಗಿ ತಿಳಿದು ಬಂದಿದೆ.