Published
1 year agoon
By
Akkare Newsಪುತ್ತೂರು:ಮುಂದಿನ ಬಜೆಟ್ ನಲ್ಲಿ ಬಂಟರ ನಿಗಮ ಸ್ಥಾಪನೆ ಮಾಡುವ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿಯಲ್ಲಿ ವಿಶ್ವ ಬಂಟರ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮತ್ತು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬಂಟರ ನಿಗಮ ಸ್ಥಾಪನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದ್ದರು. ತಮ್ಮ ಭಾಷಣದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಹೆಸರನ್ನು ಉಲ್ಲೇಖಿಸಿ ಸಿಎಂ ಈ ವಿಚಾರ ಹೇಳಿದ್ದಾರೆ. ಈ ವೇಳೆ ಸಭೆಯಲ್ಲಿ ಭಾರೀ ಹರ್ಷೋದ್ಗಾರ ವ್ಯಕ್ತವಾಯಿತು. ಶಾಸಕ ಅಶೋಕ್ ರೈ ಹೋರಾಟ ಮತ್ತು ಪರಿಶ್ರಮಕ್ಕೆ ಪ್ರತಿಫಲ ಸಿಕ್ಕಂತಾಗಿದೆ.
, ಈ ಸಂದರ್ಭದಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಮಾಜಿ ಸಚಿವ ರಮನಾಥ ರೈ,ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,ರಾಜೇಂದ್ರ ಕುಮಾರ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಿಥುನ್ ರೈ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.