Published
1 month agoon
By
Akkare Newsಪುತ್ತೂರು: ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡುತ್ತಿದ್ದ ಮಾಲಕರ ಸಹಿತ ಮೂವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಶಿವಪ್ಪ ಅವರ ಅಳಿಯ ಶಶಿ ಕೆರೆಮೂಲೆ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನ.16ರಂದು ಬೆಳಿಗ್ಗೆ ತಾವೋ ವುಡ್ ಇಂಡಸ್ಟ್ರೀಸ್ ನ ಮಾಲೀಕರಾದ ಹೆನ್ರಿ ತಾಮ್ರ ಅವರು ಶಿವಪ್ಪ ಅವರನ್ನು ಮರದ ಕೆಲಸಕ್ಕೆ ಕರೆದುಕೊಂಡು ಹೋಗಿದ್ದು ಬಳಿಕ ಅವರನ್ನು ಹೆನ್ರಿ ತಾವೋ, ಸ್ಪ್ಯಾನಿ ಹಾಗೂ ಇನ್ನೊಬ್ಬರು ಸೇರಿ ಪಿಕಪ್ ವಾಹನದಲ್ಲಿ ಮರದ ದಿಮ್ಮಿಗಳ ಮೇಲೆ ಮಲಗಿಸಿಕೊಡು ಬಂದು ಶಿವಪ್ಪ ಅವರ ಮನೆಯ ಬಳಿ ರಸ್ತೆ ಬದಿಯಲ್ಲಿ ಮಲಗಿಸಿ ಹೋಗಿದ್ದರು.