Published
5 days agoon
By
Akkare Newsಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವ ಅಭೂತಪೂರ್ವ ಯಶಸ್ವಿಯಾಗಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂದು ಕೇಂದ್ರ ಸರಕಾರದ ಮಾಜಿ ಸಚಿವ ಬಿ ಜನಾರ್ದನ ಪೂಜಾರಿ ತಿಳಿಸಿದರು.
ಅವರು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಜನವರಿ 19ರಂದು ಬಂಟ್ವಾಳದ ಎಸ್.ವಿ.ಎಸ್ ಶಾಲಾ ಮೈದಾನದಲ್ಲಿ ಜರುಗುವ ಕೋಟಿ ಚೆನ್ನಯ ಕ್ರೀಡೋತ್ಸವದ ಆಮಂತ್ರಣ ಸ್ವೀಕರಿಸಿ ಮಾತಾಡಿದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ ಸಂಜೀವ ಪೂಜಾರಿ ಗುರುಕೃಪಾ, ಪ್ರಧಾನ ಕಾರ್ಯದರ್ಶಿ ರಮೇಶ್ ಎಮ್ ತುಂಬೆ, ಕೋಶಾಧಿಕಾರಿ ಆನಂದ ಸಾಲ್ಯಾನ್, ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ರಾಜೇಶ್ ಸುವರ್ಣ ರಾಜಲಕ್ಷ್ಮಿ, ಸುಂದರ ಪೂಜಾರಿ ಬೊಳಂಗಡಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಉಪಸ್ಥಿತರಿದ್ದರು.