Published
2 days agoon
By
Akkare Newsಮಂಗಳೂರು: ನಾನು ರಾಜಕೀಯ ನಿವೃತ್ತಿ ಘೋಷಿಸಿಲ್ಲ, ಕಿಡಿಗೇಡಿಗಳು ಸುಳ್ಳು ಸುದ್ದಿ ಹಂಚಿದ್ದಾರೆ ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದ್ದೆ. ಹೊಸ ವರ್ಷ ಪ್ರಯುಕ್ತ ಸಿಹಿ ಹಂಚಿದ್ದು ಹೌದು, ಭಾಷಣ ಮಾಡಿದ್ದೂ ಹೌದು. ಆದರೆ ಎಲ್ಲೂ ಕೂಡಾ ರಾಜೀನಾಮೆ ನೀಡುವುದಾಗಿ ಹೇಳಿಲ್ಲ ಎಂದರು.
ಯಾರೋ ಕಿಡಿಗೇಡಿಗಳಿಂದ ಇಂತಹ ಸುಳ್ಳು ಸುದ್ದಿ ಹರಡಲಾಗಿದೆ. ಇದು ಸತ್ಯಕ್ಕೆ ದೂರವಾದ ಸುದ್ದಿ. ಕಳೆದ ಏಳು ವರ್ಷಗಳಿಂದ ಅಧ್ಯಕ್ಷನಾಗಿದ್ದೇನೆ. ಯಾರ ಹೆಸರನ್ನು ಹೈಕಮಾಂಡ್ ಪ್ರಕಟಿಸುತ್ತದೋ ಆಗಲೇ ನಾನು ಅಧ್ಯಕ್ಷ ಹುದ್ದೆ ಹಸ್ತಾಂತರಿಸುತ್ತೇನೆ. ರಾಜಕೀಯ ನಿವೃತ್ತಿಯ ಮಾತೇ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.