ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ನಕ್ಸಲ್ ಮುಕ್ತ ಕರ್ನಾಟಕ, ಎಎನ್‍ಎಫ್… ನಕ್ಸಲ್ ಮುಕ್ತ ಕರ್ನಾಟಕ, ಎಎನ್‍ಎಫ್ ರದ್ದುಗೊಳಿಸಲು ತೀರ್ಮಾನ : ಸಿಎಂ ಸಿದ್ದರಾಮಯ್ಯ

Published

on

ಬೆಂಗಳೂರು : ಆರು ಮಂದಿ ಶರಣಾಗುವ ಮೂಲಕ ರಾಜ್ಯದಲ್ಲಿ ನಕ್ಸಲ್ ಹೋರಾಟ ಅಂತ್ಯ ಕಂಡಿದ್ದು, ನನ್ನ ಪ್ರಕಾರ ಕರ್ನಾಟಕ ರಾಜ್ಯವು ನಕ್ಸಲ್ ಹೋರಾಟದಿಂದ ಮುಕ್ತಗೊಂಡಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್‍ಎಫ್) ರದ್ದುಗೊಳಿಸುವ ಕುರಿತು ಚರ್ಚೆ ನಡೆಸಿ ತೀರ್ಮಾನ ಪ್ರಕಟಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.


 

ಬುಧವಾರ ಇಲ್ಲಿನ ಗೃಹ ಕಚೇರಿ ಕೃಷ್ಣದಲ್ಲಿ ಆರು ಮಂದಿ ನಕ್ಸಲ್ ಹೋರಾಟಗಾರರನ್ನು ಮುಖ್ಯವಾಹಿನಿಗೆ ಸ್ವಾಗತಿಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಕ್ಸಲಿಸಂ ರಹಿತವಾದ ಮುಕ್ತವಾದ ಸಮಾಜ ನಮ್ಮ ಗುರಿ. ಈ ಹಿನ್ನೆಲೆಯಲ್ಲಿ ಮುಖ್ಯವಾಹಿನಿಗೆ ಬರುವ ನಕ್ಸಲಿಯರಿಗೆ ಎಲ್ಲಾ ರೀತಿಯ ನೆರವು ಬಹಿರಂಗವಾಗಿ ಹೇಳಿದ್ದೆ. ನಿಮಮ್ಮನ್ನು ಕ್ರಿಮಿನಲ್‍ಗಳ ರೀತಿ ನೋಡದೆ, ಮಾನವರಂತೆ ನೋಡುವ ಭರವಸೆ ನೀಡಿದ್ದೆ ಎಂದರು.

 

ನಕ್ಸಲೀಯರ ಶರಣಾಗತಿಯಲ್ಲಿ ಸಮಿತಿಯ ಸದಸ್ಯರ ಪಾತ್ರ ಮುಖ್ಯವಾಗಿದ್ದು, ಅವರಿಗೆ ಹಾಗೂ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಬಯಸುತ್ತೇನೆ ಎಂದ ಅವರು, ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ , ನ್ಯಾಯಯುತವಾಗಿ ಮಾಡಬೇಕು ಎಂದು ಹೇಳಿದರು.

 

ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್ ವಸತಿಗೆ ಸರ್ಕಾರ ನೆರವು ಒದಗಿಸಿದೆ. ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲನೆರವು ನೀಡಲಿದೆ ಎಂದು ಹೇಳಿದ್ದೆ. ನಾವು ಕರ್ನಾಟಕದಲ್ಲಿ ನಕ್ಸಲಿಸಂ ಕೊನೆಗಾಣಿಸಲು, ಅವರ ಬೇಡಿಕೆಗೆ ಸ್ಪಂದಿಸಲು ಏನೆಲ್ಲಾ ಕಾರ್ಯಕ್ರಮ ಬೇಕೋ ಅದನ್ನು ಕಾನೂನು ಚೌಕಟ್ಟಿನಲ್ಲಿ ಮಾಡುತ್ತೇವೆ ಎಂದು ಉಲ್ಲೇಖಿಸಿದರು.

ಬಡವರ ಹಕ್ಕುಗಳ ರಕ್ಷಣೆಗಾಗಿ ಅವರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬರಲು ಅನೇಕ ಕಾರ್ಯಕ್ರಮ ಜಾರಿ ಮಾಡಿದೆ. ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮೀ ಯೋಜನೆ ಉದ್ದೇಶ ಇದೇ ಆಗಿದೆ. ಗೌರವಯುತವಾಗಿ ಬಡವರು ಬದುಕಲು ಅವಕಾಶ ಇದರಿಂದ ಸಿಗಲಿದೆ. ಬಡವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಬದುಕಲು ಶಕ್ತಿ ಬಂದರೆ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು.

 

ಸುನೀಲ್ ಕುಮಾರ್‌ಗೆ ತಿರುಗೇಟು ಕೊಟ್ಟ ಸಿಎಂ: ‘ರಾಜ್ಯದಲ್ಲಿ ಆರು ಮಂದಿ ನಕ್ಸಲೀಯರು ಶರಣಾಗುತ್ತಿರುವಾಗ ಬೆಚ್ಚಿಬಿದ್ದಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಳೆದ ತಿಂಗಳು ಛತ್ತೀಸ್‍ಘಢದಲ್ಲಿ ಶರಣಾದ 30 ನಕ್ಸಲರನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ಖುದ್ದಾಗಿ ಬರಮಾಡಿಕೊಂಡು ಆನಂದಬಾಷ್ಟ ಸುರಿಸಿದಾಗ ಯಾಕೆ ಬೆಚ್ಚಿಬಿದ್ದಿಲ್ಲ ಎಂದು ಕೇಳಬೇಕಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 

ಅಮಿತ್ ಶಾ ಅವರಿಗೆ ನಕ್ಸಲರ ಬಗ್ಗೆ ಯಾಕೆ ಇಷ್ಟೊಂದು ಪ್ರೀತಿ ಎಂದು ಕೇಳುವ ದಮ್ಮು ಸುನೀಲ್ ಕುಮಾರ್ ಅವರಿಗೆ ಇದೆಯೇ?. ಕಳೆದ ವರ್ಷ ಮಹಾರಾಷ್ಟ್ರದಲ್ಲಿ ಶರಣಾದ ನಕ್ಸಲ್ ದಂಪತಿಗೆ ಅಲ್ಲಿನ ಬಿಜೆಪಿ ಸರಕಾರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು 41 ಲಕ್ಷ ರೂಪಾಯಿಗಳ ನೆರವು ನೀಡಿರುವುದು ಶಾಸಕ ಸುನೀಲ್ ಕುಮಾರ್ ಗೊತ್ತಿರಲಿಲ್ಲವೇ? ಈ ನೆರವನ್ನು ಯಾವ ಮಾನದಂಡದಲ್ಲಿ ನೀಡಿದ್ದೀರಿ ಎಂದು ಕೇಳುವ ಧೈರ್ಯ ಸುನೀಲ್ ಕುಮಾರ್ ಅವರಿಗೆ ಇದೆಯೇ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಅಲ್ಲದೆ, ಶರಣಾಗಿರುವ ಈ ನಕ್ಸಲೀಯರ ಅನುಸರಿಸಿದ ಹಿಂಸಾ ಮಾರ್ಗದ ಬಗ್ಗೆ ನಮಗೆಲ್ಲರಿಗೂ ವಿರೋಧವಿದೆ. ಆದರೆ ಇವರಲ್ಲಿ ಯಾರೂ ಜನರ ತೆರಿಗೆ ಹಣವನ್ನು ನುಂಗಿದ ಭ್ರಷ್ಟರೂ ಅಲ್ಲ, ರಾಮ-ಪರಶುರಾಮನ ಮೂರ್ತಿ ನಿರ್ಮಾಣದಲ್ಲಿಯೂ ಮೋಸ ಮಾಡಿ ಜೇಬು ತುಂಬಿಕೊಂಡವರೂ ಅಲ್ಲ. ಲಾಠಿ-ದೊಣ್ಣೆ, ಕತ್ತಿ-ತ್ರಿಶೂಲಗಳನ್ನು ನೀಡಿ ಅಮಾಯಕರನ್ನು ಹಿಂಸಾಮಾರ್ಗಕ್ಕೆ ಇಳಿಸಿ ರಾಜಕೀಯ ಲಾಭ ಗಳಿಸುವ ಕುತಂತ್ರದ ರಾಜಕಾರಣ ನಮ್ಮದ್ದಲ್ಲ. ದಾರಿ ತಪ್ಪಿ ಹಿಂಸೆಯ ಮಾರ್ಗ ಹಿಡಿದವರ ಮನವೊಲಿಸಿ ಸಮಾಜದ ಮುಖ್ಯವಾಹಿನಿಗೆ ಸೇರಿಸಿ ಅವರನ್ನು ಜವಾಬ್ದಾರಿಯುತ ನಾಗರಿಕರನ್ನಾಗಿ ಪರಿವರ್ತನೆ ಮಾಡುವುದು ಒಂದು ಸರಕಾರದ ಕರ್ತವ್ಯವಾಗಿದೆ ಎಂದರು.

Continue Reading
Click to comment

Leave a Reply

Your email address will not be published. Required fields are marked *

Advertisement